ಸುಳ್ಯ : ರಾಧಾಕೃಷ್ಣ ಬೊಳ್ಳೂರು ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರಿಂದ ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕರ ಭೇಟಿ

0

ಸುಳ್ಯದಲ್ಲಿ ಶಾಂತಿ ಸುವ್ಯವಸ್ಥೆ ಮತ್ತು ವಿಪತ್ತು ನಿರ್ವಹಣೆ ಬಗ್ಗೆ ಚರ್ಚೆ

ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಜೂ.5ರಂದು ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ್ ರನ್ನು ಭೇಟಿಯಾಗಿ ಸುಳ್ಯದಲ್ಲಿ ಶಾಂತಿ ಸುವ್ಯವಸ್ಥೆ ಮತ್ತು ವಿಪತ್ತು ನಿರ್ವಹಣೆ ಕುರಿತು ಚರ್ಚಿಸಿದರು.

ಸುಳ್ಯದಲ್ಲಿ ಶಾಂತಿ ಸುವ್ಯವಸ್ಥೆ ನೆಲೆಗೊಳಿಸುವ ನಿಟ್ಟಿನಲ್ಲಿ ಯಾವುದೇ ಮುಲಾಜಿಲ್ಲದೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಿ ಆದರೆ ಯಾವುದೇ ಪೂರ್ವಾಗೃಹ ಇಲ್ಲದೆ ಕೈಗೊಳ್ಳಬೇಕು, ಆದರೆ ಸಾಮಾನ್ಯ ಜನರಿಗೆ ತೊಂದರೆಯಾಗದಂತೆ ಕಾರ್ಯನಿರ್ವಹಿಸಬೇಕು. ಮಟ್ಕಾ ದಂಧೆ ಸೇರಿದಂತೆ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಿಗೆ ಆಸ್ಪದ ನೀಡಬೇಡಿ, ಆದರೆ ನಿರಪರಾಧಿಗಳಿಗೆ ಕಿರುಕುಳ ವಾಗಬಾರದು ಎಂದು ರಾಧಾಕೃಷ್ಣ ಬೊಳ್ಳೂರು ಸಲಹೆ ನೀಡಿದರು.

ಜಿಲ್ಲೆಯಲ್ಲಿ ಅಶಾಂತಿಯ ವಾತಾವರಣ ನಿರ್ಮಾಣವಾಗಿದೆ ಖಡಕ್ ಅಧಿಕಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಬಂದಿರುವುದು ಸರಕಾರದ ಒಳ್ಳೆಯ ನಿರ್ಧಾರವಾಗಿದೆ. ಸಾಮಾಜಿಕ ಶಾಂತಿ ಅಗತ್ಯವಾಗಿದೆ ಈ ನಿಟ್ಟಿನಲ್ಲಿ ಸಮಾನ ನಾಗರಿಕ ಕಾನೂನು ಅನುಷ್ಠಾನವಾಗಲಿ. ಇದರಿಂದಾಗಿ ತಾಲೂಕಿನಲ್ಲಿ ಶಾಂತಿ ಸುವ್ಯವಸ್ಥೆ ನೆಲೆಯಾಗಬೇಕು ಎಂದು ಈ ಸಂದರ್ಭದಲ್ಲಿ ತಿಳಿಸಿದರು.

ಮಳೆಗಾಲ ಪ್ರಾರಂಭವಾಗಿದೆ ತಾಲೂಕು ಆಡಳಿತದೊಂದಿಗೆ ನಮ್ಮ ತಂಡ ಯಾವಾಗಲು ಕೈಜೋಡಿಸುತ್ತಿದೆ. ಮುಂದಿನ ದಿನಗಳಲ್ಲಿ ಯಾವುದೇ ಪ್ರಾಕೃತಿಕ ವಿಕೋಪ ಸಂಭವಿಸದಂತೆ ಮತ್ತು ವಿಪತ್ತು ಸಂಭವಿಸಿದರೆ ಪೊಲೀಸ್ ಇಲಾಖೆ ತುರ್ತು ಸ್ಪಂಧಿಸಬೇಕು ತಾಲೂಕಿನ ಯಾವುದೇ ಗ್ರಾಮದಲ್ಲಿ ಯಾವುದೇ ನಾಗರಿಕರಿಗೆ ಅಪಾಯ ಎದುರಾಗದಂತೆ ಶ್ರಮ ವಹಿಸಬೇಕು ಎಂದು ಸಲಹೆ ನೀಡಿದರು.

ಪೊಲೀಸ್ ಇಲಾಖೆ ಯೊಂದಿಗೆ ನಮ್ಮ ವಿಪತ್ತು ನಿರ್ವಹಣಾತಂಡ ಯಾವುದೇ ಕ್ಷಣದಲ್ಲಿಯೂ ಸಹಕರಿಸಲಿದೆ. ನಮ್ಮ ಸಹಕಾರ ಯಾವಾಗಲು ಪಡೆಯಬಹುದು ಎಂದು ರಾಧಾಕೃಷ್ಣ ಬೊಳ್ಳೂರು ಈ ಸಂದರ್ಭದಲ್ಲಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯ ಭವಾನಿಶಂಕರ್ ಕಲ್ಮಡ್ಕ, ನಗರ ಪಂಚಾಯತ್ ಮಾಜಿ ಉಪಾಧ್ಯಕ್ಷ ಗೋಕುಲ್ ದಾಸ್, ಆಲೆಟ್ಟಿ ಗ್ರಾಮ ಪಂಚಾಯತ್ ಸದಸ್ಯ ಸತ್ಯಕುಮಾರ್ ಅಡಿಂಜ, ಯುವ ಕಾಂಗ್ರೆಸ್ ಅಧ್ಯಕ್ಷರು, ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ್ ಎಂ ಜೆ, ವಿಜಯಕುಮಾರ್ ಆಲೆಟ್ಟಿ ಉಪಸ್ಥಿತರಿದ್ದರು.