ಬಾಳಿಲ ವಿದ್ಯಾಬೋಧಿನೀ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

0

ಬಾಳಿಲ ವಿದ್ಯಾಬೋಧಿನೀ ವಿದ್ಯಾಸಂಸ್ಥೆಯಲ್ಲಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ಶಾಲಾ ತೋಟದಲ್ಲಿ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನವನ್ನು ಜೂ. 5ರಂದು ಆಚರಿಸಿದರು.


ಬಳಿಕ
ವಿದ್ಯಾಬೋಧಿನೀ ಪ್ರೌಢಶಾಲಾ ಸಭಾಂಗಣದಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ರಾಮನ್ ಇಕೋ ಕ್ಲಬ್ ನ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆಯ ಕಾರ್ಯಕ್ರಮ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ವಿದ್ಯಾಬೋಧಿನೀ ಎಜುಕೇಶನಲ್ ಸೊಸೈಟಿ ಅಧ್ಯಕ್ಷರಾದ ರಾಧಾಕೃಷ್ಣ ರಾವ್ ಯು ವಹಿಸಿದರು. ವಿಶೇಷ ಆಹ್ವಾನಿತರಾಗಿ ಪ್ರಗತಿಪರ ಕೃಷಿಕರಾದ ಡಾ. ಪಿ.ಅರ್ ಭಟ್ ದೇವಸ್ಯ ಭಾಗವಹಿಸಿ, ಸಾವಯವ ಕೃಷಿ ಪದ್ಧತಿಗೆ ಹೆಚ್ಚು ಪ್ರೋತ್ಸಾಹ ನೀಡುವಂತೆ ಕರೆ ನೀಡಿದರು. ವಿದ್ಯಾಸಂಸ್ಥೆಯ ಸಂಚಾಲಕರಾದ ಪಿ.ಜಿ.ಎಸ್.ಎನ್ ಪ್ರಸಾದ್ ಪರಿಸರ ದಿನಾಚರಣೆ ಸಂದೇಶ ನೀಡಿದರು. ಮುಖ್ಯಶಿಕ್ಷಕ ಉದಯಕುಮಾರ್ ರೈ ಎಸ್ ಸ್ವಾಗತಿಸಿ, ಗಣಿತ ವಿಜ್ಞಾನ ಶಿಕ್ಷಕಿ ಅಪರ್ಣ ಟಿ ವಂದಿಸಿದರು. ರಾಮನ್ ಇಕೋ ಕ್ಲಬ್ ನ ಸಂಚಾಲಕ ಶಿಕ್ಷಕರಾದ ಮೋಹನ್ ಕೆ.ಸಿ. ಪ್ರಸ್ತಾವನೆಗೈದರು. ವಿದ್ಯಾರ್ಥಿಗಳಿಗೆ ಪರಿಸರ ದಿನಾಚರಣೆಯ ಪ್ರಯುಕ್ತ ವರ್ಣ ಚಿತ್ರ ಸ್ಪರ್ಧೆ ಆಯೋಜಿಸಲಾಗಿತ್ತು. ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿನಿಯರಾದ ಛಾಯ, ಪ್ರಾಪ್ತಿ, ರಕ್ಷಾ, ಶ್ರಾವ್ಯಾ ಮತ್ತು ಸಾನ್ವಿ ಆರಂಭ ಗೀತೆ ಹಾಡಿದರು. ವಿದ್ಯಾರ್ಥಿಗಳಾದ ನಿಶಾಲ್ ಭಾಸ್ಕರ್ ಮತ್ತು ಲಿಖಿತ್ ಕಾರ್ಯಕ್ರಮ ನಿರೂಪಿಸಿದರು. ಪ್ರೌಢಶಾಲೆಯ ರಾಮನ್ ಇಕೋ ಕ್ಲಬ್ ಈ ಕಾರ್ಯಕ್ರಮವನ್ನು ಸಂಘಟಿಸಿತು. ಕಾರ್ಯಕ್ರಮದಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.