ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

0

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂ. 5ರಂದು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರು ಮತ್ತು ಉಪ ಪ್ರಾಂಶುಪಾಲರು ಗಿಡ ನೆಡುವುದರ ಮೂಲಕ ಪರಿಸರದ ಪ್ರಾಮುಖ್ಯತೆಯನ್ನು ವೇದ್ಯಗೊಳಿಸಿದರು. ಫಾತಿಮಾತ್ ಯಾಶಿರ ನಿರೂಪಣೆ ಮಾಡಿದರು.

ಚಿಂತನ ಮತ್ತು ತಂಡ ಸಾಮೂಹಿಕ ಪರಿಸರಗೀತೆ ಹಾಡಿದರು. ಸೃಷ್ಟಿ ವಿಶ್ವ ಪರಿಸರ ದಿನದ ಪ್ರಾಮುಖ್ಯತೆ ತಿಳಿಸಿದರು. ಖುಷಿ ವಿಶ್ವ ಪರಿಸರ ದಿನದ ಮಹತ್ವ ಹಾಗೂ ವೈಶಿಷ್ಟ್ಯದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಸಮೀಕ್ಷಾ ಗಿಡಮೂಲಿಕೆಗಳ ಮೌಲ್ಯದ ಕುರಿತಂತೆ ಮಾತಾಡಿದರು. ಅಮೂಲ್ಯ ಪರಿಸರ ಹಾನಿಯಿಂದಾಗಿ ಸಂಭವಿಸಬಹುದಾದ ಅನಾಹುತಗಳ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದರು.

ಮ್ಯಾನೇಜಿಂಗ್ ಟ್ರಸ್ಟ್ ಡಾ. ರೇಣುಕಾ ಪ್ರಸಾದ್ ಕೆ ವಿ, ಟ್ರಸ್ಟಿ ಡಾ. ಜ್ಯೋತಿ ಆರ್ ಪ್ರಸಾದ್ ಹಾಗೂ ಕಾಲೇಜಿನ ಸಿಇಒ ಡಾ. ಉಜ್ವಲ್ ಯು ಜೆ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮವನ್ನು ಜೀವಶಾಸ್ತ್ರ ಉಪನ್ಯಾಸಕಿ ಅರ್ಪಿತ ಕೆ ಎನ್ ಆಯೋಜಿಸಿದ್ದರು. ಸಿಬ್ಬಂದಿಗಳು ಉಪಸ್ಥಿತರಿದ್ದರು.