ಸುಳ್ಯದ ಸೈಂಟ್ ಬ್ರಿಜಿಡ್ಸ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಇತ್ತೀಚೆಗೆ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಜೊತೆ ಕಾರ್ಯದರ್ಶಿ ಫಾದರ್ ಆಲ್ವಿನ್ ಎಡ್ವರ್ಡ್ ಡಿಕುನ್ಹಾರವರು ವಿವಿಧ ತರಕಾರಿ ಬೀಜಗಳನ್ನು ಬಿತ್ತುವುದರ ಮೂಲಕ ಕಾರ್ಯವನ್ನು ಉದ್ಘಾಟಿಸಿದರು.









ನಂತರ ಶಾಲಾ ವಿದ್ಯಾರ್ಥಿಗಳಿಂದ ಪರಿಸರಗೀತೆ, ಪ್ಲಾಸ್ಟಿಕ್ ಜಾಗೃತಿ ಕುರಿತು ಕಿರುನಾಟಕ,ಭಾಷಣ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ನಗರ ಪಂಚಾಯತ್ ಸದಸ್ಯ ಧೀರ ಕ್ರಾಸ್ತ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಮಮತಾ, ಸ್ಕೌಟ್ ಗೈಡ್ ಸ್ಥಳೀಯ ಸಂಸ್ಥೆಯ ಅದ್ಯಕ್ಷ ಶಶಿಧರ್ ಎಂ.ಜೆ., ಶ್ರೀಮತಿ ಪ್ರೇಮಲತಾ, ರಾಜು ಪಂಡಿತ್, ಸಿಸ್ಟರ್ ಅಂತೋನಿ ಮೇರಿ, ಮುಖ್ಯೋಪಾಧ್ಯಾಯಿನಿ ಹಾಗೂ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ಶಿಕ್ಷಕಿ ಶ್ರೀಮತಿ ಪಾವನಾ ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ಸುರೇಖಾ ವಂದಿಸಿ, ಶಿಕ್ಷಕಿ ಶ್ರೀಮತಿ ಗೀತಾ ಕಾರ್ಯಕ್ರಮ ನಿರೂಪಿಸಿದರು.









