ಸುಳ್ಯದ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನ ಇಕೋ ಕ್ಲಬ್ ನ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಪರಿಸರ ಸಂರಕ್ಷಣೆ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮದಲ್ಲಿ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಇಲ್ಲಿಯ ನಿವೃತ್ತ ಚಿತ್ರಕಲಾ ಶಿಕ್ಷಕರಾದ ಶ್ರೀ ಉಮೇಶ್ ಶಾಂತಿನಗರ ರವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದರು.
ಶ್ರೀಯುತರು ಪರಿಸರ ಸಂರಕ್ಷಣೆಯ ಅಗತ್ಯತೆ ಮತ್ತು ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ದ ಬಗ್ಗೆ ಮಾಹಿತಿ ನೀಡಿದರು.









ಈ ಸಂದರ್ಭದಲ್ಲಿ ವಿಶ್ವ ತಾಪಮಾನವನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಗಿಡಗಳನ್ನು ನೆಟ್ಟು ಸಂರಕ್ಷಿಸಬೇಕೆಂದು ಕರೆ ನೀಡಿದರು. ವಿದ್ಯಾರ್ಥಿಗಳಿಗೆ ಕಸಿ ಕಟ್ಟುವ ವಿಧಾನದ ಬಗ್ಗೆ ವಿಶೇಷ ಪ್ರಾತ್ಯಕ್ಷತೆಯನ್ನು ನೀಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ದಯಾಮಣಿ.ಕೆ ರವರು ವಹಿಸಿದರು.
ಅರ್ಥಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಸ್ವರ್ಣಕಲಾ.ಎಸ್ ರವರು ಪ್ರಾಸ್ತಾವಿಕ ಮಾತುಗಳನ್ನಾಡಿ, ಸಂಕಲ್ಪ ವಿಧಿಯನ್ನು ಬೋಧಿಸಿದರು. ಇಕೋ ಕ್ಲಬ್ ಸಂಚಾಲಕಿ ಶ್ರೀಮತಿ ಕೃತಿ ಪಿ ಎಸ್ ರವರು ಸ್ವಾಗತಿಸಿ, ಜೀವಶಾಸ್ತ್ರ ಉಪನ್ಯಾಸಕರಾದ ಶ್ರೀ ದಯಾನಂದ ಓ.ಡಿ ರವರು ವಂದಿಸಿದರು. ರಸಾಯನ ಶಾಸ್ತ್ರ ಉಪನ್ಯಾಸಕಿ ಶ್ರೀಮತಿ ದೀಪ್ತಿ ರವರು ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಎಲ್ಲಾ ಬೋಧಕ, ಭೋದಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.










