ಕೆ.ಎಸ್ ಗೌಡ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ – ಫ್ಯೂಷನ್ 2025-26

0

ನಿಂತಿಕಲ್ಲಿನ ಕೆ.ಎಸ್ ಗೌಡ ಪದವಿಪೂರ್ವ ಕಾಲೇಜಿನ 2025-26ನೇ ಶೈಕ್ಷಣಿಕ ವರ್ಷದ ಪ್ರಥಮ ಪಿಯುಸಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಕಾರ್ಯಕ್ರಮ ಫ್ಯೂಷನ್ 2025-26 ಜೂ. 11ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಆಡಳಿತ ಮಂಡಳಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಕೆ.ಎಸ್ ಮಾತನಾಡಿ, ವಿದ್ಯಾರ್ಥಿಗಳ ಗೆಲುವಿನ ಹಾದಿಗೆ ಬೆಳಕ ಬೀರುವ ಧ್ಯೇಯ ವಾಕ್ಯದೊಂದಿಗೆ ಈ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಲಾಗಿದೆ. ವಿದ್ಯಾರ್ಥಿಗಳು ಇಲ್ಲಿನ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಶಿಕ್ಷಣವನ್ನು ಪಡೆಯಬೇಕು. ಸಂಸ್ಕಾರಯುತ ಶಿಕ್ಷಣ ನಮ್ಮ ಉದ್ದೇಶ ಎಂದು ಹೇಳಿ ಶುಭ ಹಾರೈಸಿದರು.

ಪ್ರಾಚಾರ್ಯರಾದ ಸದಾನಂದ ರೈ ಕೂವೆಂಜ ವಿದ್ಯಾರ್ಥಿಗಳು ಅನುಸರಿಸಬೇಕಾದ ನಿಯಮಗಳ ಬಗ್ಗೆ ಮಾಹಿತಿ ನೀಡಿ ಕಾಲೇಜಿನಲ್ಲಿ ದೊರಕುವ ಸೌಲಭ್ಯಗಳ ಬಗ್ಗೆ ವಿವರ ನೀಡಿದರು. ಭೌತಶಾಸ್ತ್ರ ಉಪನ್ಯಾಸಕರಾದ ಉಜ್ವಲ್ ಕೆ.ಎಚ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಉಪನ್ಯಾಸಕರಾದ ಜೀವನ್ ಎಸ್.ಎಚ್, ಉಪನ್ಯಾಸಕಿಯರಾದ ವೇದಾವತಿ ಎಸ್, ಜ್ಯೋತ್ಸ್ನಾ, ಸಂಧ್ಯಾ, ಸೌಮ್ಯ, ಜಾಸ್ಮಿನ್, ಅನುಷಾ, ಕಛೇರಿ ಸಿಬ್ಬಂದಿ ಪ್ರಮೀಳಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳೇ ಸಂಘಟಿಸಿದ ಈ ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗ ಅಪೂರ್ವ ಸ್ವಾಗತಿಸಿ, ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ನಿಶ್ಮಿತಾ ವಂದಿಸಿದರು. ಗಾಯನ್ ರೈ ಹೂ ನೀಡಿ ಸ್ವಾಗತಿಸಿದರು. ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಗ್ರೀಷ್ಮ ಕಾರ್ಯಕ್ರಮ ನಿರೂಪಿಸಿದರು. ದ್ವಿತೀಯ ಪಿಯುಸಿಯ ಪುಣ್ಯ ಬಹುಮಾನ ವಿಜೇತರ ಬಗ್ಗೆ ಮಾಹಿತಿ ನೀಡಿದರು. ಮಮತಾ ಮತ್ತು ತಂಡದವರು ಪ್ರಾರ್ಥಿಸಿದರು. ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಹಲವಾರು ಸ್ಪರ್ಧೆಗಳನ್ನು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿತ್ತು.