














ಕಳಂಜ ಗ್ರಾಮದ ವಾರಣಾಶಿ ದಿ. ಶಿವರಾಮ ಹೆಬ್ಬಾರರ ಪತ್ನಿ ಶ್ರೀಮತಿ ಗೌರಮ್ಮ ಇಂದು (ಜೂ. 13) ಮಧ್ಯಾಹ್ನ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರಿಗೆ 83 ವರ್ಷ ವಯಸ್ಸಾಗಿತ್ತು. ಮೃತರು ಪುತ್ರರಾದ ಸೂರ್ಯನಾರಾಯಣ ವಾರಣಾಶಿ, ಸುಬ್ಬಪ್ಪಯ್ಯ, ಶ್ರೀಕೃಷ್ಣ, ಪುತ್ರಿಯರಾದ ಶ್ರೀಮತಿ ವಿಜಯಲಕ್ಷ್ಮಿ, ಶ್ರೀಮತಿ ಪ್ರೇಮ, ಶ್ರೀಮತಿ ವಿದ್ಯಾಸರಸ್ವತಿ ಸೇರಿದಂತೆ ಮೊಮ್ಮಕ್ಕಳು, ಕುಟುಂಬಸ್ಥರು, ಬಂಧು ಮಿತ್ರರನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.



