ಎಲಿಮಲೆ : ಸರಕಾರಿ ಪ್ರೌಢಶಾಲೆಯಲ್ಲಿ ಷೋಷಕರ ಸಭೆ ಹಾಗೂ ಎಸ್ ಎಸ್ ಎಲ್ ಸಿ ಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಅಭಿನಂದನೆ

0

ಸರಕಾರಿ ಪ್ರೌಢಶಾಲೆ ಎಲಿಮಲೆಯಲ್ಲಿ ಪೋಷಕರ ಸಭೆ ಜೂ. 13ರಂದು ನಡೆಯಿತು.

ಎಸ್ ಡಿ ಎಂ ಸಿ ಅಧ್ಯಕ್ಷರಾದ ಧನಂಜಯ ಬಾಳೆತೋಟ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೈಲೇಶ ಅಂಬೆಕಲ್ಲು, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಲೀಲಾವತಿ ಸೇವಾಜೆ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದರಾಜೇಶ್ ಅಂಬೆಕಲ್ಲು, ಶಾಲಾ ಮುಖ್ಯ ಶಿಕ್ಷಕಿ ಸಂಧ್ಯಾ ಕೆ, ಎಸ್‌ ಡಿ ಎಂ ಸಿ ಸದಸ್ಯರು ಪೋಷಕರು, ಶಿಕ್ಷಕರು ಹಾಗೂ ಶಾಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸಭೆಯಲ್ಲಿ ಪೋಷಕರ ಜವಾಬ್ದಾರಿ ಬಗ್ಗೆ ಮಾಹಿತಿ ನೀಡಲಾಯಿತು. ಹಾಗೂ ವಿದ್ಯಾರ್ಥಿಗಳಿಗೆ ಸರಕಾರದಿಂದ ಕೊಡಮಾಡಿದ ಉಚಿತ ಸಮವಸ್ತ್ರಗಳನ್ನು ವಿತರಿಸಲಾಯಿತು.

  ಇದೇ ಸಮಾರಂಭದಲ್ಲಿ 2024-25ನೇ ಸಾಲಿನಲ್ಲಿ 10ನೇ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ ಶಾಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಚೇತನ್ ಪ್ರಭು ಕೆ. (611/625) ಹಾಗೂ 500 ಕ್ಕಿಂತ ಹೆಚ್ಚು ಅಂಕ ಗಳಿಸಿದ ಇತರ 19 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. 




ಶಿಕ್ಷಕರಾದ ವಸಂತ ನಾಯಕ್ ಸ್ವಾಗತಿಸಿ, ಸಂಗೀತ ಸಿ ವಿ ಧನ್ಯವಾದ ಅರ್ಪಿಸಿದರು. ಮುರಳೀಧರ ಪುನುಕುಟ್ಟಿ ಕಾರ್ಯಕ್ರಮ ನಿರೂಪಿಸಿದರು.