ಸಮಾಜ ಕಲ್ಯಾಣ: ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

0

2025-26ನೇ ಸಾಲಿನಲ್ಲಿ ಮೂಲನಿವಾಸಿ ಕೊರಗ ಸಮುದಾಯದ 7 ಮತ್ತು 10ನೇ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಬಾರಿಗೆ ಉತ್ತೀರ್ಣರಾದ ಆದಿವಾಸಿ ಕೊರಗ ಸಮುದಾಯಕ್ಕೆ ಸೇರಿದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಅರ್ಜಿಯನ್ನು ಸಹಾಯಕ ನಿರ್ದೇಶಕರು(ಗ್ರೇಡ್-2) ಸಮಾಜ ಕಲ್ಯಾಣ ಇಲಾಖೆ, ಸುಳ್ಯ ಕಛೇರಿಯಿಂದ ಪಡೆದು ಭರ್ತಿ ಮಾಡಿ ಶಾಲಾ ಮುಖ್ಯೋಪಾದ್ಯಾಯರಿಂದ ದೃಢೀಕರಿಸಿ, ಅಂಕಪಟ್ಟಿ ಪ್ರತಿ, ಜಾತಿ ಪ್ರಮಾಣ ಪತ್ರದ ಪ್ರತಿ, ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಖಾತೆ ಪ್ರತಿಯನ್ನು ಅರ್ಜಿಯೊಂದಿಗೆ ಲಗತ್ತಿಸಿ, ದಿನಾಂಕ: 30.06.2025ರೊಳಗೆ ಸಮಾಜ ಕಲ್ಯಾಣ ಇಲಾಖಾ ಕಛೇರಿಗೆ ಸಲ್ಲಿಸಬಹುದು.