














ದಿ. ಶರತ್ ಜೋಶಿಯವರ 2ನೇ ಪುಣ್ಯತಿಥಿಯ ಅಂಗವಾಗಿ ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ ಜೂ. 17ರಂದು ಶಾಲಾ ಸಭಾಂಗಣದಲ್ಲಿ ನಡೆಯಲಿದೆ.
ಶರತ್ ಜೋಶಿ ಮೆಮೋರಿಯಲ್ ಟ್ರಸ್ಟ್ ಮತ್ತು ಶ್ರೀ ಸದಾಶಿವ ಚಾರಿಟೇಬಲ್ ಸೊಸೈಟಿ ಆಶ್ರಯದಲ್ಲಿ ನಡೆಯಲಿರುವ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು
ಬಿ. ಸುಬ್ರಹ್ಮಣ್ಯ ಜೋಶಿ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಂಶುಪಾಲರಾದ ಬಿ.ವಿ. ಸೂರ್ಯನಾರಾಯಣ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ. ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಶ್ರೀನಾಥ್ ರೈ ಬಾಳಿಲ ಮುಖ್ಯ ಅತಿಥಿಯಾಗಿ ಮತ್ತು ಗೌರವ ಉಪಸ್ಥಿತರಾಗಿ ಸಂಸ್ಥೆಯ ಪ್ರಾಂಶುಪಾಲರಾದ ಜನಾರ್ಧನ ಕೆ.ಎನ್, ಉಪಪ್ರಾಂಶುಪಾಲೆ ಉಮಾಕುಮಾರಿ ಮತ್ತು ಹಿರಿಯ ಮುಖ್ಯ ಶಿಕ್ಷಕ ಮಾಯಿಲಪ್ಪ ಜಿ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ. ಒಟ್ಟು 150 ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ನಡೆಯಲಿದೆ.










