














ಬೆಳ್ಳಾರೆಯ ಶ್ರೀ ಸದಾಶಿವ ಚಾರಿಟೇಬಲ್ ಸೊಸೈಟಿ ಆಶ್ರಯದಲ್ಲಿ ಚಿತ್ಕಲಾ ಆರ್ಟ್ಸ್ ತರಗತಿ ಜೂ. 15ರಂದು ಪುನರಾರಂಭಗೊಂಡಿತು. ಶ್ರೀ ಸದಾಶಿವ ಚಾರಿಟೇಬಲ್ ಸೊಸೈಟಿ ಅಧ್ಯಕ್ಷ ಬಿ. ಸುಬ್ರಹ್ಮಣ್ಯ ಜೋಶಿ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು ಅತಿಥಿಯಾಗಿ ಭಾಗವಹಿಸಿ ಶುಭ ಹಾರೈಸಿದರು. ಚಿತ್ಕಲಾ ಆರ್ಟ್ಸ್ ಸಂಸ್ಥೆಯ ಮುಖ್ಯಸ್ಥೆ ಶ್ರೀಮತಿ ಶಮಿತಾ ಪಿ. ರೈ ಸ್ವಾಗತಿಸಿ, ವಂದಿಸಿದರು. ಪ್ರದೀಪ್ ಕುಮಾರ್ ರೈ ಪನ್ನೆ ಪ್ರಾಸ್ತಾವಿಕ ಮಾತುಗಳನ್ನಾಡಿದರು.










