ಪ್ರಯಾಣಿಕರು ಸಣ್ಣ ಪುಟ್ಟ ಗಾಯದಿಂದ ಪಾರು
















ಅಡ್ಕಾರು ಜಾಲ್ಸೂರು ಕಡೆಯಿಂದ ಸುಳ್ಯಕ್ಕೆ ಹೋಗುತ್ತಿದ್ದ ಡಸ್ಟರ್ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಪಲ್ಟಿಯಾದ ಘಟನೆ ಇದೀಗ ವರದಿಯಾಗಿದೆ.
ಕಾರು ಸಂಪೂರ್ಣವಾಗಿ ತಲೆಕೆಳಗಾಗಿ ರಸ್ತೆಯಲ್ಲಿ ಬಿದ್ದಿದ್ದು ಘಟನೆಯಿಂದ ಕಾರು ನಜ್ಜುಗುಜ್ಜಾಗಿ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಅಲ್ಪಸ್ವಲ್ಪ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.










