ಜನರೊಂದಿಗೆ ಜನತಾದಳ ಅಭಿಯಾನ ಕಾರ್ಯಕ್ರಮದಲ್ಲಿ ಸುಳ್ಯದ‌ ಜನತಾದಳ ಮುಖಂಡರು‌ ಭಾಗಿ

0

ಜೂ.15ರಂದು‌ ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ನಡೆದ ಜನರೊಂದಿಗೆ ಜನತಾದಳ ಅಭಿಯಾನ‌ ಕಾರ್ಯಕ್ರಮದಲ್ಲಿ ಸುಳ್ಯದ ಮುಖಂಡರು‌ ಭಾಗವಹಿಸಿದ್ದರು.

ಸಮಾರಂಭದಲ್ಲಿ ಮಿಸ್ ಕಾಲ್ ಕೊಡುವ ಮೂಲಕ ಸದಸ್ಯತ್ವ ನೋಂದಣಿಗೆ ಚಾಲನೆ ನೀಡಲಾಯಿತು. ರಾಜ್ಯದಲ್ಲಿ ಸುಮಾರು 50‌ಲಕ್ಷ ಸದಸ್ಯತ್ವದ ಗುರಿ‌ಹೊಂದಲಾಗಿದ್ದು, ಮೊದಲ ಹಂತದಲ್ಲಿ ಸುಮಾರು 58 ವಿಧಾನಸಭಾ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿಯವರ ನೇತೃತ್ವದಲ್ಲಿ ಸದಸ್ಯತ್ವ ನೋಂದಣಿ‌ ನಡೆಯಲಿದೆ.

ಈ ಕಾರ್ಯಕ್ರಮಕ್ಕೆ ಸುಳ್ಯದಿಂದ ಪಕ್ಷದ ಜಿಲ್ಲಾಧ್ಯಕ್ಷ‌ ಜಾಕೆ ಮಾಧವ ಗೌಡ, ಯುವ ಘಟಕದ ಅಧ್ಯಕ್ಷ ಅಕ್ಷಿತ್ ಸುವರ್ಣ, ತಾಲೂಕು ಘಟಕದ ಅಧ್ಯಕ್ಷ ಸುಕುಮಾರ್ ಕೋಡ್ತುಗುಳಿ, ಪ್ರಧಾನ ಕಾರ್ಯದರ್ಶಿ ರಾಕೇಶ್ ಕುಂಟಿಕಾನ ಮೊದಲಾದವರು ಭಾಗವಹಿಸಿದ್ದರು.