ಸುಳ್ಯ ತಾಲೂಕು ಕೇಂದ್ರದಲ್ಲಿ ಆಧಾರ್ ಕೇಂದ್ರ ಸ್ಥಾಪಿಸುವಂತೆ ಜಿಲ್ಲಾಧಿಕಾರಿಯವರಿಗೆ ಮನವಿ

0

ಸುಳ್ಯ ತಾಲೂಕು ಕೇಂದ್ರ ಎಲ್ಲಾ ಶಿಕ್ಷಣ ಸಂಸ್ಥೆ ಗಳನ್ನು ಪ್ರದೇಶ ವಾಗಿದ್ದು ಕೇರಳ ರಾಜ್ಯ ಮತ್ತು ಪ್ರವಾಸಿ ತಾಣ ಕೊಡಗು ಜಿಲ್ಲೆಗಳ ಗಡಿ ಪ್ರದೇಶವಾಗಿದ್ದು ಇಲ್ಲಿ ಆಧಾರ್ ನೋಂದಣಿ ಕೇಂದ್ರ ಇರುವುದಿಲ್ಲ.
ಇದರಿಂದ ಜನರಿಗೆ ಬಹಳಷ್ಟು ತೊಂದರೆಯಾಗಿದ್ದು ಕೂಡಲೇ ಆಧಾರ್ ನೋಂದಣಿ, ತಿದ್ದುಪಡಿ ಕೇಂದ್ರ ಪ್ರಾರಂಬಿಸುವಂತೆ ಸಂಬಂಧಪಟ್ಟವರಿಗೆ ಆದೇಶ ನೀಡಬೇಕಾಗಿ ದ ಕ. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ರವರನ್ನು ಭೇಟಿಯಾಗಿ ಸುಳ್ಯ ನಗರ ಯೋಜನಾ ಪ್ರಾಧಿಕಾರ (ಸೂಡ )ಅಧ್ಯಕ್ಷ
ಕೆ. ಎಂ. ಮುಸ್ತಫ ಹಾಗೂ ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ಸಂಶುದ್ಧಿನ್ ಮನವಿ ಸಲ್ಲಿಸಿದರು.

ಸಕಾರತ್ಮಕವಾಗಿ ಸ್ಪಂದಿಸಿದ ಜಿಲ್ಲಾಧಿಕಾರಿಯವರು ಕೂಡಲೇ ಕ್ರಮ ವಹಿಸುದಾಗಿ ತಿಳಿಸಿದರೆಂದು ತಿಳಿದುಬಂದಿದೆ.