ನಿರಂತರ ಯೋಗಾಭ್ಯಾಸದಿಂದ ಆರೋಗ್ಯ ವೃದ್ಧಿ : ಇ.ಒ. ರಾಜಣ್ಣ

“ಪ್ರತೀ ದಿನ ಒತ್ತಡದಲ್ಲಿ ಕೆಲಸ ನಿರ್ವಹಿಸುವ ನಮ್ಮ ದೇಹಕ್ಕೆ ಯೋಗ ಹೊಸ ಚೈತನ್ಯ ನೀಡುತ್ತದೆ. ಹಾಗೂ ನಿರಂತರ ಯೋಗಾಭ್ಯಾಸದಿಂದ ಆರೋಗ್ಯ ವೃದ್ಧಿಸುತ್ತದೆ” ಎಂದು ಸುಳ್ಯ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಹೇಳಿದರು.
11 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ತಾಲೂಕು ಪಂಚಾಯತ್ ಸುಳ್ಯ, ಯುವಜನ ಸಂಯುಕ್ತ ಮಂಡಳಿ ಸುಳ್ಯ, ಪ್ರೆಸ್ ಕ್ಲಬ್ ಸುಳ್ಯ, ಜರ್ನಲಿಸ್ಟ್ ಯೂನಿಯನ್ ಸುಳ್ಯ, ಕಾರ್ಯನಿರತ ಪತ್ರಕರ್ತರ ಸಂಘ ಸುಳ್ಯ, ಪಯಸ್ವಿನಿ ಯುವಕ ಮಂಡಲ ಕೇರ್ಪಳ ಇದರ ಆಶ್ರಯದಲ್ಲಿ ನಡೆದ ಯೋಗ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹಿರಿಯ ಪತ್ರಕರ್ತ ಗಂಗಾಧರ್ ಮಟ್ಟಿ ದೀಪ ಬೆಳಗಿ ಕಾರ್ಯಕ್ರಮ ಉದ್ಘಾಟಿಸಿದರು.
















ಸುಳ್ಯ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ, ಯೋಗ ಗುರು ಶ್ರೀಮತಿ ಸುನಂದ ಶೆಟ್ಟಿ ಸಂಪನ್ಮೂಲ ವ್ಯಕ್ತಿಯಾಗಿದ್ದರು.
ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ, ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ್, ಎ.ಪಿ.ಎಂ.ಸಿ. ಕಾರ್ಯದರ್ಶಿ ರವೀಂದ್ರ, ಸಹಾಯಕ ಕಾರ್ಯದರ್ಶಿ ಮುದ್ದುಕೃಷ್ಣ, ಸುಳ್ಯ ಪ್ರೆಸ್ ಕ್ಲಬ್ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ, ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ವಿಜಯಕುಮಾರ್ ಉಬರಡ್ಕ, ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷೆ ಜಯಶ್ರೀ ಕೊಯಿಂಗೋಡಿ, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಲೋಕೇಶ್ ಪೆರ್ಲಂಪಾಡಿ, ಪಯಸ್ವಿನಿ ಯುವಕ ಮಂಡಲದ ಅಧ್ಯಕ್ಷ ಭರತ್ ಕುರುಂಜಿ, ಸುದ್ದಿ ಬಿಡುಗಡೆ ಹಿರಿಯ ವರದಿಗಾರ ಕೃಷ್ಣ ಬೆಟ್ಟ, ಸುಳ್ಯ ಸಿ.ಎ. ಬ್ಯಾಂಕ್ ನಿರ್ದೇಶಕ ಶಿವರಾಮ ಕೇರ್ಪಳ, ತಾಲೂಕು ಪಂಚಾಯತ್ ಎಡಿಎ ರವಿಚಂದ್ರ ಅಕ್ಕಪ್ಪಾಡಿ, ಜಯಕೃಷ್ಣ ಕಾಯರ್ತೋಡಿ ಮುಖ್ಯ ಅತಿಥಿಗಳಾಗಿದ್ದರು.

ಜಂಟೀ ಸಂಘಗಳ ಪದಾಧಿಕಾರಿಗಳು, ಸಮಾಜಕಲ್ಯಾಣ ಇಲಾಖೆಯ ಹಾಸ್ಟೆಲ್ ವಿದ್ಯಾರ್ಥಿಗಳು ಯೋಗ ದಿನಾಚರಣೆಯಲ್ಲಿ ಭಾಗವಹಿಸಿದ್ದರು.
ಸುದ್ದಿ ಬಿಡುಗಡೆ ಕಚೇರಿ ವ್ಯವಸ್ಥಾಪಕ ಯಶ್ವಿತ್ ಕಾಳಮ್ಮನೆ ವಂದಿಸಿದರು. ಶಿವಪ್ರಸಾದ್ ಕೇರ್ಪಳ ಕಾರ್ಯಕ್ರಮ ನಿರ್ವಹಿಸಿದರು.










