ಆಲೆಟ್ಟಿ ಸರಕಾರಿ ಪ್ರೌಢಶಾಲೆಯಲ್ಲಿ
ಜೂ. 28ರಂದು ಭತ್ತದ ಗಿಡ ನಾಟಿ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಉಳಿಯ ಬಾಲಕೃಷ್ಣ ಇವರ ಗದ್ದೆಯಲ್ಲಿ ಹಮ್ಮಿಕೊಳ್ಳಲಾಯಿತು. ವಿದ್ಯಾರ್ಥಿ ಗಳೆಲ್ಲರೂ ನಾಟಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸ್ವಅನುಭವವನ್ನು ಪಡೆದುಕೊಂಡರು . ಕಾರ್ಯಕ್ರಮದಲ್ಲಿ ಪ್ರೌಢಶಾಲೆಯ ಶಿಕ್ಷಕರು ಭಾಗವಹಿಸಿದ್ದರು.

























