ರೋಟರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿಯವರಿಗೆ ಪ್ರಾರಂಭೋತ್ಸವ

0

ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜು ಸುಳ್ಯ ಇಲ್ಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರಾರಂಭೋತ್ಸವವು ಜೂನ್ ೨೪ರಂದು ಸಂಸ್ಥೆಯಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಸಂಸ್ಥೆಯ ಸಂಚಾಲಕರಾದ ರೊ.ಪಿ.ಪಿ.ಪಿಹೆಚ್‌ಎಫ್ ಪ್ರಭಾಕರನ್ ನಾಯರ್ ಅವರು ದೀಪ ಬೆಳಗಿಸಿ ಉದ್ಘಾಟಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ಶುಭ ಹಾರೈಸಿದರು.


ಯುವ ವಿದ್ಯಾರ್ಥಿಗಳಿಗೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ನೈತಿಕ ಮೌಲ್ಯಗಳ ಬಗ್ಗೆ ಫಿಲೋಮಿನಾ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ರಾದ ಭರತ್ ಕುಮಾರ್.ಎ ಅವರು ಉಪನ್ಯಾಸ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಶೋಭಾ ಬೊಮ್ಮೆಟ್ಟಿ ಅವರು ಸ್ವಾಗತಿಸಿ, ಕಾಲೇಜಿನ ವಿದ್ಯಾರ್ಥಿನಿ ಅಫೀಫ ಅವರು ವಂದಿಸಿದರು. ವಿದ್ಯಾರ್ಥಿನಿಯರಾದ ಭಾನವಿ,ಅವನಿ ಮತ್ತು ಯಶಸ್ವಿ ಅವರು ಪ್ರಾರ್ಥನೆಗೈದರು. ರೋಟರಿ ಟ್ರಸ್ಟ್ ನ ಅಧ್ಯಕ್ಷರಾದ ರೊ.ಯೋಗಿತಾ ಗೋಪಿನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿಯೋಜಿತ ಅಧ್ಯಕ್ಷರಾದ ರೊ.ಡಾ.ರಾಮ್ ಮೋಹನ್, ರೋಟರಿ ಚಾರಿಟೇಬಲ್ ಟ್ರಸ್ಟ್ (ರಿ) ಸುಳ್ಯ ಇದರ ಟ್ರಸ್ಟೀಗಳಾಗಿರುವ ರೊ. ಮಧುಸೂದನ್, ರೊ. ದಯಾನಂದ್ ಆಳ್ವ ಹಾಗೂ ಪ್ರೌಢಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ವೀಣಾ ಶೇಡಿಕಜೆ ಮುಂತಾದವರು ಉಪಸ್ಥಿತರಿದ್ದರು.