








ಬೆಳ್ಳಾರೆಯ ಕಲ್ಪವೃಕ್ಷ ಆರ್ಕೆಡ್ ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ 2025-26ನೇ ಸಾಲಿನ ತರಗತಿಗಳ ಉದ್ಘಾಟನೆ, ಪೋಷಕರ ಸಭೆ ಹಾಗೂ 2024-25ನೇ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಕಾಮಧೇನು ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಎಂ ಮಾಧವ ಗೌಡ ಉದ್ಘಾಟಿಸಿ, 2024-25ನೇ ಸಾಲಿನಲ್ಲಿ ಅತೀ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಪುರಸ್ಕರಿಸಿದರು. 2024-25ನೇ ಸಾಲಿನಲ್ಲಿ ಶೇ. 100 ಫಲಿತಾಂಶದೊಂದಿಗೆ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ಲೋಕೇಶ್ ಎಂ, ಉಪನ್ಯಾಸಕಿಯರುಗಳಾದ ಗೀತಾ ಬಾಲಚಂದ್ರ, ವಿಜಿತಾ, ರಶ್ಮಿ, ಸಿಂಚನಾ ಕೆ ಪಿ ಉಪಸ್ಥಿತರಿದ್ದರು. ಉಪನ್ಯಾಸಕ ಯೋಗೀಶ್ ತಳೂರು ಕಾರ್ಯಕ್ರಮ ನಿರ್ವಹಿಸಿದರು.










