ಇಂದು ಕುಕ್ಕೆ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ನ ಪದಗ್ರಹಣ ಸಮಾರಂಭ

0

ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ 2025 -26ನೇ ಸಾಲಿನ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಏನೆಕಲ್ಲು ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ಜು.1 (ಇಂದು) ಸಂಜೆ ನಡೆಯಲಿರುವುದು.

ಪದಗ್ರಹಣ ಅಧಿಕಾರಿಯಾಗಿ ಲಯನ್ಸ್ ಜಿಲ್ಲೆ, 317 ಡಿ ಇದರ ವೈಸ್ ಡಿಸ್ಟ್ರಿಕ್ಟ್ ಗವರ್ನರ್ ಗೋವರ್ಧನ ಶೆಟ್ಟಿ ನೆರವೇರಿಸಲಿರುವರು. ಕಾರ್ಯಕ್ರಮದಲ್ಲಿ ಜೀವನ್ ಜ್ಯೋತಿ ವಿಶೇಷ ಮಕ್ಕಳ ಶಾಲೆಗೆ ಸಹಾಯಧನ, ಸುಬ್ರಹ್ಮಣ್ಯದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸ್ಕೌಟ್ಸ್ ಹಾಗೂ ಗೈಡ್ಸ್ ವಿದ್ಯಾರ್ಥಿಗಳಿಗೆ ಯೂನಿಫಾರ್ಮ್ ಗಾಗಿ ನಗದು ಕೊಡುವ ಕಾರ್ಯಕ್ರಮ ಇರುವುದಾಗಿ ಸಂಘಟಕರು ತಿಳಿಸಿದ್ದಾರೆ.