ಸುಳ್ಯದ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಾಥಮಿಕ ಶಾಲಾ ಮಂತ್ರಿಮಂಡಲದ ಪದಗ್ರಹಣ ಸಮಾರಂಭವು ಜು.1ರಂದು ನಡೆಯಿತು. ಮುಖ್ಯ ಅತಿಥಿಯಾಗಿ ಜಯರಾಮ ದೇರಪ್ಪಜ್ಜನ ಮನೆ ಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.









ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಮೇರಿ ಸ್ಟೆಲ್ಲಾ ರವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.. ಶಾಲಾ ಮಂತ್ರಿ ಮಂಡಲ ಹಾಗೂ ವಿರೋಧ ಪಕ್ಷದ ರಚನೆಯಾಯಿತು. ಮುಖ್ಯ ಶಿಕ್ಷಕರ ಮಾರ್ಗದರ್ಶನದಲ್ಲಿ ಮಂತ್ರಿ ಮಂಡಲದ ಸದಸ್ಯರೆಲ್ಲರೂ ಪ್ರಮಾಣ ವಚನವನ್ನು ಸ್ವೀಕರಿಸಿದರು.
ಮುಖ್ಯ ಅತಿಥಿಗಳ ಪರಿಚಯವನ್ನು ಶಿಕ್ಷಕಿ ಶ್ರೀಮತಿ. ಶೋಭಾ ಇವರು ನೆರವೇರಿಸಿದರು. ಮುಖ್ಯ ಅತಿಥಿಗಳು ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮವನ್ನು ಶಿಕ್ಷಕಿ ಶ್ರೀಮತಿ ಜ್ಯೋತಿ ಇವರು ನಿರೂಪಿಸಿದರು. ಸ್ವಾಗತ ಭಾಷಣವನ್ನು 7ನೇ ತರಗತಿಯ ವಿದ್ಯಾರ್ಥಿನಿ ಹಾರ್ದಿಕ. ಕೆ. ಕೆ ಹಾಗೂ ವಂದನಾರ್ಪಣೆಯನ್ನು 6ನೇ ತರಗತಿಯ ವಿದ್ಯಾರ್ಥಿನಿ ಪ್ರಣಮ್ಯಾ ಇವರು ನೆರವೇರಿಸಿದರು. ಎಲ್ಲಾ ಶಿಕ್ಷಕ ವೃಂದದವರು ಸಹಕರಿಸಿದರು.










