















ಪಂಜ ಸ.ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ಸ್ವಾಗತ ಕಾರ್ಯಕ್ರಮ ಜೂ.28ರಂದು ನಡೆಯಿತು.
ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಚಿನ್ನಪ್ಪ ಕಾಣಿಕೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ, ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳು ಕಲಿಕೆಯೊಂದಿಗೆ ಶಿಸ್ತನ್ನು ಮೈಗೂಡಿಸಿಕೊಳ್ಳ ಬೇಕು” . ಎಂದು ಹೇಳಿದರು.

ಅತಿಥಿಗಳಾಗಿ ಮಾಜಿ ಗ್ರಾಮ ಪಂಚಾಯತ್ ಸದಸ್ಯ ರಫೀಕ್ ಶುಭ ಹಾರೈಸಿದರು. ಕಾಲೇಜಿನ ಪ್ರಭಾರ ಪ್ರಾಂಶುಪಾಲ ಚಿದಾನಂದ ಕೆ. ಅಧ್ಯಕ್ಷತೆ ವಹಿಸಿ, ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ಶುಭ ಹಾರೈಸಿದರು.
ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಉಮೇಶ್ ಎಂ ಪ್ರಾರ್ಥಮಿಕ ಮಾತುಗಳೊಂದಿಗೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕಾವ್ಯ ಪ್ರಾರ್ಥಿಸಿದರು. ವನ್ಯಶ್ರೀ ಸ್ವಾಗತಿಸಿ, ಚೈತನ್ಯ ವಂದಿಸಿದರು. ವಿದ್ಯಾರ್ಥಿಗಳಾದ ಕಾವ್ಯ, ತೇಜಸ್ ಕುಮಾರ್ ನಿರೂಪಿಸಿದರು.










