ಪೆರಾಜೆ ಗ್ರಾಮದ ಮೂಲೆಮಜಲು ಚಿನ್ನಪ್ಪನವರ ಧರ್ಮಪತ್ನಿ ಶ್ರೀಮತಿ ಯಶೋದರವರು ಜು. 1 ರಂದು ರಂದು ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನರಾದರು. ಅವರಿಗೆ 68 ವರ್ಷ ವಯಸ್ಸಾಗಿತ್ತು.
ಕೆಲ ದಿನಗಳಿಂದ ವಯೋಸಹಜ ಅನಾರೋಗ್ಯಕ್ಕೆ ಒಳಗಾಗಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದ ಅವರು. ಜು. 1 ರಂದು ರಾತ್ರಿ ತೀವ್ರ ಹೃದಯಾಘಾತಕ್ಕೆ ಒಳಗಾದರು.
ಕೂಡಲೇ ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು.








ಇವರು ಬೆಂಗಳೂರಿನ ಸೆಂಟ್ ಅನ್ಸ್ ಶಾಲೆಯಲ್ಲಿ ಅಧ್ಯಾಪಕಿ ವೃತ್ತಿಯಲ್ಲಿದ್ದು ಉತ್ತಮ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ಕೊಡಗು ಮತ್ತು ದ.ಕ. ಗೌಡ ಸಮಾಜದಲ್ಲಿ ಸಕ್ರಿಯ ಸದಸ್ಯರಾಗಿ ದ್ದರು.
ಮೃತರು ಪತಿ, ಪುತ್ರ ದಿಲೀಪ್,
ಪುತ್ರಿಯರಾದ ರಮ್ಯಾ, ಗೀತಾ, ಸೊಸೆ, ಅಳಿಯಂದಿರು ಮತ್ತು ಮೊಮ್ಮಕ್ಕಳನ್ನು, ಕುಟುಂಬಸ್ಥರನ್ನು ಬಂಧು ಮಿತ್ರರನ್ನು ಅಗಲಿದ್ದಾರೆ.










