ಗುತ್ತಿಗಾರಿನ ಬಳ್ಳಕ ಅಂಗನವಾಡಿ ಕೇಂದ್ರದಲ್ಲಿ ಎಲ್ ಕೆಜಿ ಹಾಗೂ ಯುಕೆಜಿ ತರಗತಿಗಳ ಪ್ರಾರಂಭೋತ್ಸವ ಹಾಗೂ ಪೋಷಣ್ ಅಭಿಯಾನ ಕಾರ್ಯಕ್ರಮ ಜು. 7 ರಂದು ಬೆಳಗ್ಗೆ ನಡೆಯಲಿದೆ.















ಶಾಸಕಿ ಕು.ಭಾಗೀರಥಿ ಮುರುಳ್ಯ ಎಲ್ ಕೆ ಜಿ ಮತ್ತು ಯುಕೆಜಿ ತರಗತಿಗಳನ್ನು ಉದ್ಘಾಟಿಸಲಿದ್ದಾರೆ.
ಗುತ್ತಿಗಾರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಸುಮಿತ್ರಾ ಮೂಕಮಲೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ದ. ಕ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಉಸ್ಮಾನ್, ಪ್ರಭಾರ ನಿರೂಪಣಾಧಿಕಾರಿ
ಶ್ರೀಮತಿ ಪ್ರಿಯಾ ಆಸ್ಪೇಸ್, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಸಿ.ಡಿ.ಪಿ.ಒ. ಶ್ರೀಮತಿ ಶೈಲಜಾ ಹಾಗೂ ಗೌರವ ಉಪಸ್ಥಿತಿಯಲ್ಲಿ ಅನೇಕ ಅತಿಥಿಗಳು ಭಾಗವಹಿಸಲಿದ್ದಾರೆ. ಇದೇ ಸಂದರ್ಭ ಅಂಗನವಾಡಿಗೆ
ಕೊಡುಗೈ ದಾನಿಗಳು ನೀಡಿದ ವಿವಿಧ ವಸ್ತುಗಳ ಕೊಡುಗೆ ಹಸ್ತಾಂತರ ನಡೆಯಲಿದೆ ಎಂದು ಅಂಗನವಾಡಿ ಕಾರ್ಯಕರ್ತೆ ಲತಾ ಅಂಬೆಕಲ್ಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.










