ಕಡಬ ಮತ್ತು ಉಪ್ಪಿನಂಗಡಿಯಲ್ಲಿ ಜ್ಞಾನದೀಪ ಸಂಸ್ಥೆಯ ನವೋದಯ ತರಗತಿಗಳು ಆರಂಭ

0

ನವೋದಯ ಮತ್ತು ಮೊರಾರ್ಜಿ ಪ್ರವೇಶ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬೆಳ್ಳಾರೆ ಮತ್ತು ಸುಳ್ಯದಲ್ಲಿ ತರಗತಿಗಳನ್ನು ನಡೆಸುತ್ತಿರುವ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ವತಿಯಿಂದ ಕಡಬದ ಸರಸ್ವತಿ ವಿದ್ಯಾಲಯದಲ್ಲಿ ಮತ್ತು ಉಪ್ಪಿನಂಗಡಿಯ ವಿದ್ಯಾ ಟ್ಯೂಟೋರಿಯಲ್ಸ್ ನಲ್ಲಿ ತರಗತಿಗಳು ಆರಂಭಗೊಂಡಿದೆ. ಪ್ರಸ್ತುತ ಐದನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾನಸಿಕ ಸಾಮರ್ಥ್ಯ, ಗಣಿತ ಮತ್ತು ಭಾಷಾ ವಿಷಯಗಳಿಗೆ ಸಂಬಂಧಿಸಿದ ತರಗತಿಗಳನ್ನು ಆರಂಭಿಸಲಾಗಿದೆ. ಈಗಾಗಲೇ ಜ್ಞಾನದೀಪ ಸಂಸ್ಥೆಯಲ್ಲಿ ತರಬೇತಿ ಪಡೆದ ಒಟ್ಟು 203 ವಿದ್ಯಾರ್ಥಿಗಳು ನವೋದಯ ಶಾಲೆಗೆ ಆಯ್ಕೆಯಾಗಿದ್ದು, 2024-25ನೇ ಸಾಲಿನಲ್ಲಿ ಇಲ್ಲಿ ತರಬೇತಿ ಪಡೆದ 18 ವಿದ್ಯಾರ್ಥಿಗಳು ಪ್ರಥಮ ಸುತ್ತಿನಲ್ಲಿ ನವೋದಯ ಶಾಲೆಗೆ ಆಯ್ಕೆಯಾಗಿದ್ದಾರೆ. ಮೊರಾರ್ಜಿ ವಸತಿ ಶಾಲಾ ಪ್ರವೇಶಕ್ಕೂ ಇಲ್ಲಿ ತರಬೇತಿ ನೀಡಲಾಗುತ್ತಿದ್ದು 2024-25ನೇ ಸಾಲಿನಲ್ಲಿ ಒಟ್ಟು 52 ವಿದ್ಯಾರ್ಥಿಗಳು ಮೊರಾರ್ಜಿ ವಸತಿ ಶಾಲೆಗಳಿಗೆ ಆಯ್ಕೆಯಾಗಿದ್ದಾರೆ.ಜಿಲ್ಲೆಯಲ್ಲೇ ಅತೀ ಹೆಚ್ಚು ವಿದ್ಯಾರ್ಥಿಗಳನ್ನು ನವೋದಯ ಶಾಲೆಗೆ ಆಯ್ಕೆ ಮಾಡಿರುವ ಜ್ಞಾನದೀಪ ಸಂಸ್ಥೆಯಲ್ಲಿ 2025-26ನೇ ಸಾಲಿನಲ್ಲಿ ನವೋದಯ ಹಾಗೂ ವಿವಿಧ ವಸತಿ ಶಾಲಾ ಪ್ರವೇಶ ಪರೀಕ್ಷೆ ಬರೆಯಲಿಚ್ಚಿಸುವ ವಿದ್ಯಾರ್ಥಿಗಳಿಗೆ ತರಬೇತಿ ಪಡೆಯಲು ಸೀಮಿತ ವಿದ್ಯಾರ್ಥಿಗಳಿಗೆ ದಾಖಲಾತಿಗೆ ಅವಕಾಶವಿದೆ ಆಸಕ್ತರು ದೂರವಾಣಿ ಸಂಖ್ಯೆ 9845713297ಗೆ ಕರೆ ಮಾಡಿ ದಾಖಲಾತಿ ಮಾಡಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.