ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ಬೃಹತ್ ಸ್ವಚ್ಛತಾ ಕಾರ್ಯಕ್ರಮ

0

ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ನಡೆಯುವ ಮಾಸಿಕ ಸ್ವಚ್ಛತಾ ಕಾರ್ಯಕ್ರಮವು ಒಡಿಯೂರು ಗ್ರಾಮ ವಿಕಾಸ ಘಟ ಸಮಿತಿ ಐವರ್ನಾಡುರವರ ಸಹಯೋಗದೊಂದಿಗೆ ಐವರ್ನಾಡು ಗ್ರಾಮ ಪಂಚಾಯತ್ ವಠಾರ ಹಾಗೂ ಮುಖ್ಯ ರಸ್ತೆ ಯ ಬದಿಯಲ್ಲಿ ನಡೆಯಿತು.
ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರು, ಐವರ್ನಾಡು ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿಗಳು, ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರು, ಓಡಿಯೂರು ಗ್ರಾಮ ವಿಕಾಸ ಘಟ ಸಮಿತಿಯ ಮೇಲ್ವಿಚಾರಕರು, ಪದಾಧಿಕಾರಿಗಳು,ಸದಸ್ಯರು ಹಾಗೂ ಊರಿನ ಪ್ರಮುಖರು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದರು.