"ಶಿಕ್ಷಣ ಕೇವಲ ಉದ್ಯೋಗಕ್ಕಾಗಿ ಅಲ್ಲ, ಯುವ ಸಮುದಾಯ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳುವ ವಿದ್ಯೆಯಾಗಬೇಕು, ಉತ್ತಮ ಭವಿಷ್ಯದ ದೃಷ್ಟಿಯಿಂದ ವಿದ್ಯಾರ್ಥಿಗಳು ಕಲಿಕೆಯಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳುವುದರೊಂದಿಗೆ ಶೈಕ್ಷಣಿಕ ಸಾಧನೆಗಳು ಹೆಚ್ಚಾಗಬೇಕು" ಎಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು. ಭಾಗೀರಥಿ ಮುರುಳ್ಯ ತಿಳಿಸಿದರು. ಇವರು
















ಜು.5ರಂದು ಸರಕಾರಿ ಪ್ರೌಢಶಾಲೆ ಎಲಿಮಲೆಯಲ್ಲಿ ಸರಕಾರದ “ವಿವೇಕ ಯೋಜನೆ” ಯಿಂದ ನಿರ್ಮಾಣಗೊಂಡಿರುವ ಎರಡು ನೂತನ ತರಗತಿ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲು, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಪ್ರೇಮಲತಾ ದಿನೇಶ್ ಕೇರ, ಎಸ್ ಡಿ ಎಂ ಸಿ ಅಧ್ಯಕ್ಷರಾದ ಪುರುಷೋತ್ತಮ ಸುಳ್ಳಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರಾಜೇಶ್ ಅಂಬೆಕಲ್ಲು, ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ವಿಷ್ಣು ಭಟ್ ಮೂಲೆತೋಟ, ಶಾಲಾ ಮುಖ್ಯ ಶಿಕ್ಷಕಿ ಸಂಧ್ಯಾ ಕೆ, ಎಸ್ ಡಿ ಎಂ ಸಿ ಸದಸ್ಯರು, ಪೋಷಕರು, ಶಿಕ್ಷಕರು, ಶಾಲಾ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.











