ಪಂಜ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪರಿಷತ್ತು ಮತ್ತು ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ

0

ಪಂಜ ಸರಕಾರಿ ಪದವಿ ಪೂರ್ವ ಕಾಲೇಜಿನ 2025 – 26ನೇ ಸಾಲಿನ ವಿದ್ಯಾರ್ಥಿ ಪರಿಷತ್ತು ಮತ್ತು ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ ಜು. 5ರಂದು ನಡೆಯಿತು.


ಸಮಾರಂಭದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷ ಸೋಮಶೇಖರ ವಹಿಸಿದ್ದರು. ಕಡಬ ಸರಕಾರಿ ಪದವಿಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಸೆಲೀನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪಂಜ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪರಿಷತ್ತು ಮತ್ತು ವಿವಿಧ ಸಂಘಗಳ ಉದ್ಘಾಟನಾ ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲ ಚಿದಾನಂದ ಉಪಸ್ಥಿತರಿದ್ದರು.


ಶಾಲಾ ಮುಖ್ಯೋಪಾಧ್ಯಾಯರಾದ ದೇವಿಪ್ರಸಾದ್ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು. ವಿವಿಧ ಸಂಘಗಳ ಅಧ್ಯಕ್ಷರು ತಮ್ಮ ತಮ್ಮ ಸಂಘಗಳನ್ನು ಪರಿಚಯಿಸಿಕೊಂಡರು. ವಿಜ್ಞಾನ ಶಿಕ್ಷಕಿ ಶ್ರೀಮತಿ ನಿರ್ಮಲಾಕ್ಷಿ ಸ್ವಾಗತಿಸಿ, ವಿದ್ಯಾರ್ಥಿ ನಾಯಕ ಶ್ರೀಜಿತ್ ರವರು ವಂದಿಸಿದರು.