ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕರ ಕಛೇರಿಯಲ್ಲಿ ಹೆಡ್‌ಕಾನ್‌ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಶ್ವನಾಥ್ ನಾಯ್ಕ ರವರು ಸಹಾಯಕ ಪೊಲೀಸ್ ಉಪ ನಿರೀಕ್ಷಕರಾಗಿ (ಎ ಎಸ್ ಐ) ಆಗಿ ಪದೋನ್ನತಿ ಹೊಂದಿ ಸುಳ್ಯ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.















ಇವರು ಮೂಲತಃ ಬೆಳ್ತಂಗಡಿ ತಾಲೂಕಿನ ಕಾಣಿಯೂರು ಗ್ರಾಮ ನಿವಾಸಿ ತನಿಯಪ್ಪ ನಾಯ್ಕ್ ಹಾಗೂ ವಸಂತಿ ದಂಪತಿಯವರ ಪುತ್ರ. ೧೯೯೬ ರಲ್ಲಿ ಪೊಲೀಸ್ ಇಲಾಖೆಗೆ ಕರ್ತವ್ಯಕ್ಕೆ ಸೇರ್ಪಡೆಗೊಂಡರು. ಶಂಕರ ನಾರಾಯಣ ಠಾಣೆ, ವೇಣೂರು, ಬೆಳ್ತಂಗಡಿ, ಉಪ್ಪಿನಂಗಡಿ, ಸುಭ್ರಹ್ಮಣ್ಯ, ಪುತ್ತೂರು ಮುಂತಾದ ಕಡೆಗಳಲ್ಲಿ ಠಾಣೆ ಹಾಗೂ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಸೇವೆಯನ್ನು ಸಲ್ಲಿಸಿದ್ದಾರೆ. ಕಳೆದ ಒಂದು ವರ್ಷದಿಂದ ಸುಳ್ಯ ವೃತ್ತ ನಿರೀಕ್ಷಕರ ಠಾಣೆಗೆ ಹೆಡ್‌ಕಾನ್‌ಸ್ಟೇಬಲ್ ಆಗಿ ಕರ್ತವ್ಯಕ್ಕೆ ಬಂದಿದ್ದರು.
ಜು ೧೦ ರಂದು ಇವರನ್ನು ವೃತ್ತ ನಿರೀಕ್ಷರ ಕಚೇರಿಯಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ ನಡೆಸಿ ಬೀಳ್ಕೊಡಲಾಯಿತು.
ಈ ಸಂದರ್ಭದಲ್ಲಿ ವೃತ್ತ ನಿರೀಕ್ಷಕರಾದ ತಿಮ್ಮಪ್ಪ ನಾಯ್ಕ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.










