ದ.ಕ ಸಂಸದ ಕ್ಯಾ.ಬ್ರಿಜೇಶ್ ಚೌಟ ಜು.15 ರಂದು ಸುಳ್ಯ ಕ್ಷೇತ್ರ ಪ್ರವಾಸ

0

ಕಾರ್ಯಕರ್ತರ ಸಭೆ ಮತ್ತು ಅಹವಾಲು ಸ್ವೀಕಾರ

ಸುಳ್ಯ:ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟರು ಜು.15 ರಂದು ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ಮತ್ತು ಅಹವಾಲು ಸ್ವೀಕರಿಸಲಿದ್ದಾರೆ.ಜು. 15 ರ ಬೆಳಿಗ್ಗೆ 9 ಗಂಟೆಗೆ ಬೆಳ್ಳಾರೆ ಗೌರಿಪುರಂ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಬಿಜೆಪಿ ಬೆಳ್ಳಾರೆ ಮಹಾಶಕ್ತಿ ಕೇಂದ್ರ ಕಾರ್ಯಕರ್ತರ ಸಭೆ ಮತ್ತು ಸಾರ್ವಜನಿಕ ಅಹವಾಲು ಸ್ವೀಕರಿಸಲಿದ್ದು ನಂತರ 11 ಗಂಟೆ ನಡುಗಲ್ಲು ಗುತ್ತಿಗಾರು ಮಹಾಶಕ್ತಿ ಕೇಂದ್ರ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ 3 ಗಂಟೆಗೆ ಕಲ್ಲುಗುಂಡಿಯಲ್ಲಿ ಮತ್ತು 4.30 ಕ್ಕೆ ಅಲೆಟ್ಟಿಯಲ್ಲಿ ಕಾರ್ಯಕರ್ತರ ಸಭೆ ಹಮ್ಮಿಕೊಳ್ಳಲಾಗಿದೆಯೆಂದು ಸುಳ್ಯ ಬಿಜೆಪಿ ಮಂಡಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.