ಕೊಳ್ತಿಗೆ : ಯುವಕ ನೇಣು ಬಿಗಿದು ಆತ್ಮಹತ್ಯೆ

0

ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯಲ್ಲಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.14ರಂದು ನಡೆದಿದೆ.
ಪೆರ್ಲಂಪ್ಪಾಡಿಯ ಹೊಳೆಯ ದಡದ ಮರವೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.
ಮೃತಪಟ್ಟವರನ್ನು ಮಹೇಶ್ (31 ) ವರ್ಷ ಎಂದು ಗುರುತಿಸಲಾಗಿದೆ. ಇವರು ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದರು. ಮೂಲತ: ಕೇರಳದವರಾದ ಇವರು ಪೆರ್ಲಂಪಾಡಿಯ ಸಂಬಂಧಿಕರ ಮನೆಗೆ ಬಂದಿದ್ದರು.
ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ಆಗಮಿಸಿದ್ದಾರೆ. ಮೃತದೇಹವನ್ನು ಪರಿಶೀಲನೆ ನಡೆಸಿ ಸುಳ್ಯದ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿಕೊಡಲಾಗುತ್ತಿದೆ ಎಂದು ತಿಳಿದು ಬಂದಿದೆ.