ಶಿಕ್ಷಕಿ ಶ್ರೀಮತಿ ಚಂದ್ರಕಲಾರಿಗೆ ಉತ್ತಮ ಕನ್ನಡ ಸಾಧಕ ಶಿಕ್ಷಕ ಪ್ರಶಸ್ತಿ

0

ಕರುನಾಡ ಕನ್ನಡ ಕಲಾಸಿರಿ ಬಳಗದ ವತಿಯಿಂದ ನೀಡುವ ಉತ್ತಮ ಕನ್ನಡ ಸಾಧಕ ಶಿಕ್ಷಕ ಪ್ರಶಸ್ತಿಯನ್ನು ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಕನ್ನಡ ಶಿಕ್ಷಕಿ ಶ್ರೀಮತಿ ಚಂದ್ರಕಲಾರವರಿಗೆ ನೀಡಿ ಗೌರವಿಸಿದೆ.

ಕನ್ನಡ ಶಿಕ್ಷಕಿಯಾಗಿ ಹಲವು ವರ್ಷಗಳಿಂದ ಉತ್ತಮ ಸೇವೆ ಸಲ್ಲಿಸುತ್ತಿರುವ ಇವರು, ಕಳೆದ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಉತ್ತಮ ಅಂಕ ಗಳಿಸುವಲ್ಲಿ ಪಾತ್ರ ವಹಿಸಿದ್ದಕ್ಕಾಗಿ ಪ್ರಶಸ್ತಿ ಲಭಿಸಿದ್ದು, ಜುಲೈ 12ರಂದು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಲವು ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು.

ಶ್ರೀಮತಿ ಚಂದ್ರಕಲಾರವರು ನಿವೃತ್ತ ಕೃಷಿ ತಾಂತ್ರಿಕ ಅಧಿಕಾರಿ ಮೋಹನ್ ನಂಗಾರ್ ರವರ ಧರ್ಮಪತ್ನಿಯಾಗಿದ್ದಾರೆ.