ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಸೋಣಂಗೇರಿ ಇಲ್ಲಿ ಸರಕಾರದ ಆದೇಶದಂತೆ ಆಂಗ್ಲ ಮಾಧ್ಯಮ ದ್ವಿಭಾಷಾ ತರಗತಿ ಪ್ರಾರಂಭೋತ್ಸವ ಹಾಗೂ ಉದ್ಘಾಟನಾ ಕಾರ್ಯಕ್ರಮ ಜುಲೈ 18ರಂದು ನಡೆಯಿತು.
















ಜಾಲ್ಸೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸಾವಿತ್ರಿಯವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ,ಗ್ರಾಮ ಪಂಚಾಯತ್ ಸದಸ್ಯರಾದ ಈಶ್ವರ ನಾಯ್ಕ,ಶಿವಪ್ರಸಾದ್, ಶ್ರೀಮತಿ ಅಂಬಿಕಾ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಿರಂಜನ ಮಿತ್ತಮಜಲು, ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ಒಕ್ಕೂಟ ಅಧ್ಯಕ್ಷ ಗಿರಿಧರ ನಾಯರ್ ಹಿತ್ಲು, ಎಸ್ ಡಿಎಂಸಿ ಅಧ್ಯಕ್ಷ ಚಿದಾನಂದ, ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಅನುರಾಧ, ದಾನಿಗಳಾದ ಗೋಪಾಲಕೃಷ್ಣ ಸುತ್ತುಕೋಟೆ, ನಿವೃತ್ತ ಶಿಕ್ಷಕ ಅರಳಪ್ಪನ್, ನಿವೃತ್ತ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ತಂಗಮ್ಮ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಭಾಸ್ಕರ್ ಹೊಸಗದ್ದೆ, ಯೋಗೀಶ್ ಸೋಣಗೇರಿ, ಎಸ್ ಡಿ ಎಂ ಸಿ ಮಾಜಿ ಅಧ್ಯಕ್ಷ ಶೇಷಪ್ಪ ಪೂಜಾರಿ, ಶ್ರೀಮತಿ ಪ್ರೇಮ ರೈ, ಶ್ರೀಮತಿ ಲಕ್ಷ್ಮಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಶಿಕ್ಷಕಿ ಶ್ರೀಮತಿ ಜಯಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಶಿಕ್ಷಕಿ ಶ್ರೀಮತಿ ಕುಸುಮಾವತಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹ ಶಿಕ್ಷಕಿ ಶ್ರೀಮತಿ ಸವಿತಾ ವಂದಿಸಿದರು.
ಶಿಕ್ಷಕರಾದ ಶ್ರೀಮತಿ ವೇದಾವತಿ ಕುಮಾರಿ, ಪ್ರೇಮ ಕುಮಾರಿ, ಚಿತ್ರಲೇಖ ಹಾಗೂ ಅಡುಗೆ ಸಿಬ್ಬಂದಿಯವರು, ಪೋಷಕರು ಕಾರ್ಯಕ್ರಮಕ್ಕೆ ಸಹಕರಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿಯವರು ಒಂದನೇ ತರಗತಿ ವಿದ್ಯಾರ್ಥಿಗಳಿಗೆ ಲೇಖನಿ ಸಾಮಗ್ರಿ ವಿತರಿಸಿ ಕಲಿಕೆಗೆ ಪ್ರೋತ್ಸಾಹ ನೀಡಿದರು.










