ಕಲ್ಮಕಾರಿನ ವ್ಯಕ್ತಿ ನಾಪತ್ತೆ: ದೂರು ದಾಖಲು

0

ಕಲ್ಮಕಾರಿನ ಯಶವಂತ ಎಂಬವರು ಸಂಬಂಧಿಕರ ಮನೆಗೆ ಹೋಗಿ ಬರುತ್ತೇನೆ ಎಂದು ಮನೆಯಿಂದ ಹೊರ ಹೋದವರು ನಾಪತ್ತೆಯಾಗಿರುವ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಬಗ್ಗೆ ವರದಿಯಾಗಿದೆ.

ಕಲ್ಮಕಾರು ಗ್ರಾಮದ ನಿವಾಸಿ ಯಶವಂತರು ಜು.೧೪ರಂದು ಐನೆಕಿದು ಗ್ರಾಮದ ಪಾದೆಮೂಲೆಯಲ್ಲಿರುವ ತನ್ನ ಸಂಬಂಧಿಕರ ಮನೆಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದವರು ಇದುವರೆಗೆ ಮನೆಗೆ ವಾಪಸ್ಸು ಬಾರದೇ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.