ಕೆ.ಪಿ.ಸಿ.ಸಿ ಪ್ರಚಾರ ಸಮಿತಿಯಿಂದ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಉಸ್ತುವಾರಿಯಾಗಿ ನೇಮಕಗೊಂಡ ಕೆ.ಪಿ.ಜಾನಿ

0

ಮಾಜೀ ಸಚಿವರೂ ಕೆ.ಪಿ.ಸಿ.ಸಿ ಪ್ರಚಾರ ಸಮಿತಿಯ ಅಧ್ಯಕ್ಷರೂ ಆದ ವಿನಯಕುಮಾರ್ ಸೊರಕೆ ಯವರು, ಜಾನಿ ಕೆ.ಪಿ.ಯವರನ್ನು ಕೋಲಾರ ಮತ್ತು ಚಿಕ್ಕಬಳ್ಳಾಪುರ ಕ್ಕೆ ಉಸ್ತುವಾರಿಯಾಗಿ ನೇಮಿಸಿ ಆದೇಶ ಹೊರಡಿಸಿರುತ್ತಾರೆ. ಈಗಾಗಲೇ ಕೆ.ಪಿ.ಸಿ.ಸಿ ಪ್ರಚಾರ ಸಮಿತಿಯ ಮುಖ್ಯ ಸಂಯೋಜಕರಾಗಿರುವ ಕೆ.ಪಿ.ಜಾನಿಯವರು
ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅಧ್ಯಕ್ಷರಾಗಿರುವ ಕರ್ನಾಟಕ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ನಿರ್ದೇಶಕರಾಗಿದ್ದಾರೆ.