ಇಬ್ಬರು ಸ್ಥಳದಲ್ಲೇ ಮೃತ್ಯು
















ಕೊಯನಾಡು ಸಮೀಪ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಇದೀಗ ಸಂಭವಿಸಿದ ಘಟನೆ ವರದಿಯಾಗಿದೆ. ಮಂಗಳೂರು ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಲಾರಿಗೆ ಮಡಿಕೇರಿಯಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆಯಿತು.

ಕಾರಿನಲ್ಲಿ ನಾಲ್ವರು ಪ್ರಯಾಣಿಕರಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟರೆಂದು ತಿಳಿದು ಬಂದಿದೆ. ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.











