








ಬಾಳಿಲ ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳಿಂದ ಕಾರ್ಗಿಲ್ ವಿಜಯ್ ದಿವಸ್ ಆಚರಿಸಲಾಯಿತು. ವಿದ್ಯಾಬೋಧಿನೀ ಎಜುಕೇಶನ್ ಸೊಸೈಟಿ ಬಾಳಿಲ ಇದರ ಅಧ್ಯಕ್ಷರಾದ ರಾಧಾಕೃಷ್ಣರಾವ್ ಯು ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದ ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ನಿವೃತ್ತ ಸೈನಿಕರು ಮತ್ತು ಭಾರತ್ ಸ್ಕೌಟ್ ಮತ್ತುಗೈಡ್ಸ್ ಸ್ಥಳೀಯ ಸಂಸ್ಥೆ ಪಂಜ ಇದರ ಅಧ್ಯಕ್ಷರಾದ ಮಾಧವ ಬಿ.ಕೆ, ಶಾಲಾ ಸಂಚಾಲಕರಾದ ಪಿ.ಜಿ.ಎಸ್.ಎನ್ ಪ್ರಸಾದ್, ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಸೀತಾರಾಮ ಕಾಯಾರ ಉಪಸ್ಥಿತರಿದ್ದರು.

ಸಂಚಾಲಕರಾದ ಪಿ.ಜಿ.ಎಸ್.ಎನ್ ಪ್ರಸಾದ್ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಸೈನಿಕರಿಗೆ ದೀಪ ಬೆಳಗಿಸಿ ಗೌರವ ಸಲ್ಲಿಸಿದರು. ಉಳಿದವರು ಪುಷ್ಪ ನಮನ ಮಾಡಿದರು. ಸ್ಕೌಟ್ ಟ್ರೂಪ್ ಲೀಡರ್ ಮತ್ತು ಗೈಡ್ಸ್ ಕಂಪನಿ ಲೀಡರ್, ಸ್ಕೌಟ್-ಗೈಡ್ಸ್ ವಿದ್ಯಾರ್ಥಿಗಳೆಲ್ಲರೂ ಕ್ಯಾಂಡಲನ್ನು ಹುತಾತ್ಮ ಯೋಧರ ಭಾವಚಿತ್ರದ ಮುಂಭಾಗದಲ್ಲಿ ಉರಿಸಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ನಿವೃತ್ತ ಸೈನಿಕರಾದ ಮಾಧವ ಬಿ ಕೆ ಯವರನ್ನು ಸನ್ಮಾನಿಸಲಾಯಿತು. ಬಳಿಕ ಮಾತನಾಡಿ ಅವರು ವಿದ್ಯಾರ್ಥಿಗಳು ದೇಶವನ್ನು ಕಾಯುವ ಪ್ರಜೆಗಳಾಗಬೇಕು ಎಂದು ಹೇಳಿ ತಾನು ಸೈನಿಕರಾಗಿದ್ದಾಗಿನ ಅನುಭವಗಳನ್ನು ಹಂಚಿಕೊಂಡರು. ಸನ್ಮಾನ ಕಾರ್ಯಕ್ರಮದ ನಿರ್ವಹಣೆಯನ್ನು ಗೈಡ್ ಕ್ಯಾಪ್ಟನ್ ಸಹನಾ ಬಿ.ಬಿ ನಿರ್ವಹಿಸಿದರು. ಸ್ಕೌಟ್ -ಗೈಡ್ಸ್ ವಿದ್ಯಾರ್ಥಿಗಳು ದೇಶಭಕ್ತಿ ಗೀತೆ ಹಾಡಿದರು. ಮುಖ್ಯಶಿಕ್ಷಕರಾದ ಉದಯಕುಮಾರ್ ರೈ ಎಸ್ ಸ್ವಾಗತಿಸಿ, ಸ್ಕೌಟ್ ಶಿಕ್ಷಕ ಹರೀಶ ಕೆ ವಂದಿಸಿದರು. ಕಾರ್ಯಕ್ರಮವನ್ನು ಸ್ಕೌಟ್ ಶಿಕ್ಷಕ ಅರವಿಂದ ಕಾಯಾರ ನಿರ್ವಹಿಸಿದರು.










