ಕರ್ನಾಟಕ ಪಬ್ಲಿಕ್ ಸ್ಕೂಲ್, ಬೆಳ್ಳಾರೆ ಇಲ್ಲಿಯ ಶಾಲಾ ಸಭಾಂಗಣದಲ್ಲಿ ನೂತನ ಎಸ್‌ಡಿಎಂಸಿಯ ಪದಗ್ರಹಣ ಮತ್ತು ಪೋಷಕರಿಗೆ ಎಫ್ಎಲ್ ಎನ್ ಬಗ್ಗೆ ಶೈಕ್ಷಣಿಕ ಮಾಹಿತಿ ಕಾರ್ಯಗಾರ ಜು.26 ರಂದು ನಡೆಯಿತು.
















ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯರವರು ಜ್ಯೋತಿ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಿರ್ಗಮಿತ ಕಾರ್ಯಧ್ಯಕ್ಷರಾಗಿದ್ದ ಶ್ರೀನಾಥ್ ರೈ ಬಾಳಿಲ ರ ವರು ನೂತನ ಕಾರ್ಯಾಧ್ಯಕ್ಷರಾದ ಹರ್ಷ ಜೋಗಿಬೆಟ್ಟು
ವರಿಗೆ ಅಧಿಕಾರ ಹಸ್ತಾಂತರಿಸಿ ಶುಭ ಹಾರೈಸಿದರು. ಎಸ್. ಡಿ
ಎಂ. ಸಿ ಯ ನೂತನ ಸದಸ್ಯರನ್ನು ಶಾಲು ಹೊದಿಸಿ ಸ್ವಾಗತಿಸಲಾಯಿತು.

ನಿಕಟಪೂರ್ವ ಕಾರ್ಯಾಧ್ಯಕ್ಷರಾಗಿದ್ದ ಶ್ರೀನಾಥ್ ರೈ ಬಾಳಿಲ ಅವರನ್ನು ಶಾಸಕರಾದ ಕುಮಾರಿ ಭಾಗೀರಥಿ ಮುರುಳ್ಯ ಅವರು ಸನ್ಮಾನಿಸಿದರು. ನಿಕಟಪೂರ್ವ ಸದಸ್ಯರುಗಳಿಗೆ ಕೃತಜ್ಞತಾ ಪತ್ರವನ್ನು ನೀಡಿ ಗೌರವಿಸಲಾಯಿತು. ಉಪ ಪ್ರಾಂಶುಪಾಲರಾಗಿರುವ ಶ್ರೀಮತಿ ಉಮಾ ಕುಮಾರಿ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿ ಎಲ್ಲರನ್ನೂ ಸ್ವಾಗತಿಸಿದರು. ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥನೆಯನ್ನು ನಡೆಸಿಕೊಟ್ಟರು. ಪ್ರಾಥಮಿಕ ಶಾಲಾ ವಿಭಾಗದ ಮುಖ್ಯ ಗುರುಗಳಾದ
ಮಾಯಿಲಪ್ಪರವರು ನೂತನ ಕಾರ್ಯಾಧ್ಯಕ್ಷರನ್ನು ಸಭೆಗೆ ಪರಿಚಯಿಸಿದರು. ಪ್ರಾಥಮಿಕ ಶಾಲಾ ವಿಭಾಗದ ಶಿಕ್ಷಕಿ ಶ್ರೀಮತಿ ಸವಿತಾ ಗುಜರನ್ ಎಫ್ಎಲ್ಎನ್ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿದರು. ಬೆಳ್ಳಾರೆ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿರುವ ಶ್ರೀಮತಿ ನಮಿತಾ ಎಲ್ ರೈಯವರು ಹಾಗೂ ನಿವೃತ್ತ ಪ್ರಾಂಶುಪಾಲರಾಗಿರುವ ಶ್ರೀಯುತ ಸೂರ್ಯನಾರಾಯಣ ಬಿ.ವಿ.ಯವರು ಶುಭ ಹಾರೈಸಿದರು. ಕಾಲೇಜು ಪ್ರಾಂಶುಪಾಲರಾಗಿರುವ ಶ್ರೀಯುತ ಜನಾರ್ದನ ಕೆ.ಎನ್ ವಂದಿಸಿದರು.










