ಗೌಡರ ಯುವ ಸೇವಾ ಸಂಘ ಸುಳ್ಯ, ತಾಲೂಕು ಗೌಡ ಮಹಿಳಾ ಘಟಕ ಸುಳ್ಯ ಇದರ ಆಶ್ರಯದಲ್ಲಿ ಮಹಿಳಾ ಘಟಕದ “ವರ್ಷ ಸಂಭ್ರಮ” ಕಾರ್ಯಕ್ರಮ ಸಾಂದೀಪ್ ವಿಶೇಷ ಶಾಲೆಯಲ್ಲಿ ಜು.28 ರಂದು ನಡೆಯಿತು.
















ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಗೌಡ ಮಹಿಳಾ ಘಟಕದ ಅಧ್ಯಕ್ಷರಾದ ವಿನುತಾ ಪಾತಿಕಲ್ಲು ವಹಿಸಿದ್ದರು. ಮುಖ್ಯ ಅತಿಥಿ ಡಾ.ಸಾಯಿಗೀತ ಜ್ಞಾನೇಶ್ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಗೌಡ ಯುವ ಸೇವಾ ಸಂಘದ ಅಧ್ಯಕ್ಷರಾದ ಪಿ.ಎಸ್.ಗಂಗಾಧರ್, ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮಾಜಿ ಅಧ್ಯಕ್ಷರಾದ ಪಿ.ಸಿ ಜಯರಾಮ, ರಾಜ್ಯಮಟ್ಟದ ಕೆಂಪೇಗೌಡ ಪ್ರಶಸ್ತಿ ಪುರಸ್ಕೃತರಾದ ನಿತ್ಯಾನಂದ ಮುಂಡೋಡಿ, ಗೌಡ ಯುವ ಸೇವಾ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಚಂದ್ರ ಕೋಲ್ಚಾರ್, ಎಂ.ಬಿ. ಪೌಂಡೇಶನ್ ನ ಸಂಚಾಲಕರಾದ ಎಂ.ಬಿ.ಸದಾಶಿವ, ಸಾಂದೀಪ್ ಶಾಲೆಯ ಮುಖ್ಯಶಿಕ್ಷಕರಾದ ಶ್ರೀಮತಿ ಹರಿಣಿ ಸದಾಶಿವ, ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರಾದ ಕೆ.ಸಿ.ಸದಾನಂದ, ಗೌಡರ ಯುವ ಸೇವಾ ಸಂಘದ ಗೌರವಾಧ್ಯಕ್ಷರಾದ ದಿನೇಶ್ ಮಡಪ್ಪಾಡಿ, ತರುಣ ಘಟಕದ ಅಧ್ಯಕ್ಷರಾದ ಪ್ರೀತಂ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಇತ್ತೀಚೆಗೆ ಅಗಲಿದ ಆಸ್ತಿಕ್ ರಾಘವ್ ಬಾಳಿಕಳ ರವರ ಗೌರವಾರ್ಥ ಒಂದು ನಿಮಿಷದ ಮೌನ ಪ್ರಾರ್ಥನೆ ಸಲ್ಲಿಸಲಾಯಿತು. ಹಾಗೂ ಸಾಂದೀಪ್ ವಿಶೇಷ ಶಾಲೆಯ ಮಕ್ಕಳಿಂದ ನೃತ್ಯ ನಡೆಯಿತು. ಶಾಲೆಗೆ ಕ್ಯಾರಂ ಬೋರ್ಡ್ ಹಾಗೂ ಇತರ ಆಟಗಳು ನೀಡಲಾಯಿತು










