ನಾಳೆ (ಜು.3೦) ಸೋಣಂಗೇರಿಯಲ್ಲಿ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

0

ವಿಜಯ ಗ್ರಾಮಾಭಿವೃದ್ಧಿ ಸಮಿತಿ ಜಾಲ್ಸೂರು ಮತ್ತು ಕೆವಿಜಿ ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಆಶ್ರಯದಲ್ಲಿ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಜು. ೩೦ರಂದು ಸೋಣಂಗೇರಿಯ ಸ.ಉ.ಹಿ.ಪ್ರಾ.ಶಾಲೆಯಲ್ಲಿ ನಡೆಯಲಿದೆ.
ಕೆವಿಜಿ ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ಮೌರ್ಯ ಆರ್. ಪ್ರಸಾದ್ ಶಿಬಿರ ಉದ್ಘಾಟಿಸಲಿದ್ದಾರೆ. ಶಿಬಿರದಲ್ಲಿ ದಂತ ಕುಳಿ ತುಂಬುವಿಕೆ, ಹಲ್ಲಿನ ಸ್ವಚ್ಛತೆ, ಹಲ್ಲು ಕೀಳುವಿಕೆ, ಕೃತ ದಂತ ಜೋಡಣೆ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.