















ದುಗ್ಗಲಡ್ಕದ ಶ್ರೀ ದುಗ್ಗಲಾಯ ದೈವಸ್ಥಾನದ ನಾಗನಕಟ್ಟೆಯಲ್ಲಿ ನಾಗರ ಪಂಚಮಿ ಪ್ರಯುಕ್ತ ವಿವಿಧ ವೈದಿಕ ಕಾರ್ಯಗಳು ಇಂದು ನಡೆಯಿತು.
ಆ ಪ್ರಯುಕ್ತ ಕ್ಷೀರಾಭಿಷೇಕ, ಎಳನೀರು ಅಭಿಷೇಕ, ಪಂಚಾಮೃತ ಅಭಿಷೇಕ,ನಾಗ ತಂಬಿಲ ಸೇವೆ ನಡೆಯಿತು.
ದೈವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ರಾಘವೇಂದ್ರ ಭಟ್ ಕಲ್ದಂಬೆ ವೈದಿಕ ಕಾರ್ಯ ನೆರವೇರಿಸಿದರು.

ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಕುಶಾಲಪ್ಪ ಗೌಡ ಕಜೆ, ಮಾಜಿ ಅಧ್ಯಕ್ಷ ದಯಾನಂದ ಸಾಲಿಯಾನ್ ಮೂಡೆಕಲ್ಲು, ಕಾರ್ಯದರ್ಶಿ ಶೇಖರ ಕುದ್ಪಾಜೆ, ದುಗ್ಗಲಾಯ ಮಹಿಳಾ ಸಮಿತಿ ಅಧ್ಯಕ್ಷೆ ಶ್ರೀಮತಿ ಪ್ರಭಾವತಿ ರೈ ದುಗ್ಗಲಡ್ಕ, ಯುವ ಸಮಿತಿ ಅಧ್ಯಕ್ಷ ನಾರಾಯಣ ನಾಯ್ಕ, ನಗರ ಪಂಚಾಯತ್ ಸದಸ್ಯ ಬಾಲಕೃಷ್ಣ ರೈ ದುಗ್ಗಲಡ್ಕ, ಸಮಿತಿಯ ಸದಸ್ಯರು, ಊರ ಭಕ್ತಾದಿಗಳು ಉಪಸ್ಥಿತರಿದ್ದರು.










