ಎಂಎಲ್ಸಿ ಬಿ.ಕೆ.ಹರಿಪ್ರಸಾದ್ ಜನ್ಮ ದಿನಾಚರಣೆ ಪ್ರಯುಕ್ತ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ

0

ಕಾಂಗ್ರೆಸ್ ಹಿರಿಯ ಮುಖಂಡ, ವಿಧಾನಪರಿಷತ್ ಸದಸ್ಯರಾಗಿರುವ ಹರಿಪ್ರಸಾದ್ ರವರ ಜನ್ಮ ದಿನಾಚರಣೆ ಪ್ರಯುಕ್ತ ಸುಳ್ಯ ವಿಧಾನಸಭಾ ಕ್ಷೇತ್ರದ ಇಂಟೆಕ್ ಕಾಂಗ್ರೆಸ್ ಅಧ್ಯಕ್ಷ ಶಾಫಿ ಕುತ್ತಮೊಟ್ಟೆಯವರ ನೇತೃತ್ವದಲ್ಲಿ ಸುಳ್ಯ ಸರಕಾರಿ ಆಸ್ಪತ್ರೆ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ್ ರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮಕ್ಕೆ, ವಿಧಾನಸಭಾ ಚುನಾವಣಾ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಕೃಷ್ಣಪ್ಪ ಜಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸುಳ್ಯ‌ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ.ಎಸ್. ಗಂಗಾಧರ್, ನಗರ ಪ್ರಾಧಿಕಾರ ಅಧ್ಯಕ್ಷ ಕೆ.ಎಂ.ಮುಸ್ತಫಾ, ನ.ಪಂ. ಮಾಜಿ ಅಧ್ಯಕ್ಷ ಎಸ್.ಸಂಶುದ್ದೀನ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ರಾಧಾಕೃಷ್ಣ ಬೊಳ್ಳೂರು, ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸುರೇಶ್ ಎಂ.ಹೆಚ್., ಕಾಂಗ್ರೆಸ್ಎಸ್ಸಿ ಘಟಕದ ಅಧ್ಯಕ್ಷ ಮಹೇಶ್ ‌ಬೆಳ್ಳಾರ್ಕರ್,
ನ.ಪಂ. ಸದಸ್ಯರುಗಳಾದ ಡೇವಿಡ್ ದೀರ ಕ್ರಾಸ್ತ, ರಾಜು ಪಂಡಿತ್, ತಾಲೂಕು ಆರೋಗ್ಯ ಸಮಿತಿ ಸದಸ್ಯ ಶಹೀದ್ ಪಾರೆ, ಗ್ಯಾರಂಟಿ ಸಮಿತಿ ಸದಸ್ಯ ಭವಾನಿಶಂಕರ್ ಕಲ್ಮಡ್ಕ, ಚೇತನ್ ಕಜೆಗದ್ದೆ, ಹಸೈನಾರ್ ಹಾಜಿ ಗೋರಡ್ಕ, ಶಶಿಧರ್ ಎಂ.ಜೆ., ಶಿವರಾಮ ಅಮೈ, ಆಶಿಕ್ ಅರಂತೋಡು,ಹರಿಶ್ಚಂದ್ರ ಪಂಡಿತ್, ಅಬ್ಬಾಸ್, ರಕ್ಷಿತ್ ಗೂನಡ್ಕ ಮೊದಲಾದವರಿದ್ದರು.

ಇಂಟೆಕ್ ಅಧ್ಯಕ್ಷ ಶಾಫಿ‌ ಕುತ್ತಮೊಟ್ಟೆ ಸ್ವಾಗತಿಸಿ, ವಂದಿಸಿದರು.