ದೇವರಕೊಲ್ಲಿ : ಪಿಕಪ್ – ಕಾರು ಡಿಕ್ಕಿ , ಅಪಾಯದಿಂದ ಪಾರು

0

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ದೇವರ ಕೊಲ್ಲಿ ಚಾಮುಂಡೇಶ್ವರಿ ದೇವಸ್ಥಾನದ ಸಮೀಪದ ತಿರುವಿನಲ್ಲಿ ಪಿಕಪ್ ಮತ್ತು ಕಾರಿನ ನಡುವೆ ಡಿಕ್ಕಿಯಾಗಿ ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಜುಲೈ 30 ರಂದು ವರದಿಯಾಗಿದೆ.

ಮದೆ ನಾಡಿನಿಂದ ಸಂಪಾಜೆ ಕಡೆಗೆ ಬರುತ್ತಿದ್ದ ಪಿಕಪ್ ಹಾಗೂ ಮಡಿಕೇರಿಯತ್ತ ತೆರಳುತ್ತಿದ್ದ ಮಹಾರಾಷ್ಟ್ರ ರೆಜಿಸ್ಟ್ರೇಷನ್ ನ ಮಾರುತಿ ಸುಜುಕಿ ಎರ್ಟಿಗಾ ಕಾರಿನ ನಡುವೆ ಅಪಘಾತ ಸಂಭವಿಸಿದೆ . ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೆ ಪ್ರಯಾಣಿಕರು ಪಾರಾಗಿದ್ದಾರೆ. ಕಾರಿನಲ್ಲಿದ್ದ ಪ್ರಯಾಣಿಕರನ್ನು ಮಹಾರಾಷ್ಟ್ರ ಮೂಲದವರು ಎಂದು ತಿಳಿದು ಬಂದಿದೆ. ಎರಡೂ ವಾಹನಗಳು ಜಖಂಗೊಂಡಿದೆ.