ಸುಬ್ರಹ್ಮಣ್ಯ : ಡಾ| ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿಯವರ ಚಾತುರ್ಮಾಸ್ಯ ಪ್ರಯುಕ್ತ

0

ಕೆಸರ್ಡ್ ಒಂಜಿ ದಿನ ಕಾರ್ಯಕ್ರಮ

ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠ ಮತ್ತು ಕುಮಾರಸ್ವಾಮಿ ವಿದ್ಯಾಲಯ, ಹಾಗೂ ಶ್ರೀ ಗೋಪಾಲಕೃಷ್ಣ ಪ್ರೌಢ ಶಾಲೆ ಬಿಳಿನೆಲೆ ಇದರ ಆಶ್ರಯದಲ್ಲಿ
ಡಾ| ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿಯವರ ಚಾತುರ್ಮಾಸ್ಯ ಪ್ರಯುಕ್ತ ಶಾಲಾ ಮಕ್ಕಳಿಗೆ ಕೆಸರ್ಡ್ ಒಂಜಿ ದಿನ ಕಾರ್ಯಕ್ರಮ ಜು.31 ರಂದು
ಸುಬ್ರಹ್ಮಣ್ಯ ಆಗೋಳಿಕಜೆ ದೇವರಗದ್ದೆ ಗದ್ದೆಯಲ್ಲಿ ನಡೆಯಿತು.


ಡಾ| ವಿದ್ಯಾಪ್ರಸನ್ನತೀರ್ಥ ಶ್ರೀಗಳು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.


ಈ ಸಂದರ್ಭ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ, ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠದ ಆಡಳಿತ ಅಧಿಕಾರಿ ಸುದರ್ಶನ ಜೋಯಿಸ, ಕುಮಾರಸ್ವಾಮಿ ವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ಗಣೇಶ್ ಪ್ರಸಾದ್, ಆಡಳಿತ ಮಂಡಳಿ ಉಪಾಧ್ಯಕ್ಷ ಶಿವರಾಮ ಏನೆಕಲ್ಲು, ಕುಮಾರಸ್ವಾಮಿ ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾರತ್ನ ಮತ್ತಿತರರು ಉಪಸ್ಥಿತರಿದ್ದರು.

ಶಾಲಾ ಮಕ್ಕಳಿಗೆ ಹಾಗೂ ಸಾರ್ವಜನಿಕ ಪುರುಷರು ಮತ್ತು ಮಹಿಳೆಯರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಸಲಾಯಿತು.