ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಸುಳ್ಯ ತಾಲೂಕು ಇದರ ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮ ಮಂಡೆಕೋಲು ಶಾಲೆಯಲ್ಲಿ ಜು.30 ರಂದು ನಡೆಸಲಾಯಿತು.
ವಿದ್ಯಾರ್ಥಿಗಳು ಗಿಡಗಳಿಗೆ ನೀರು ಹಾಕುವ ಮುಖಾಂತರ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.















ಅಧ್ಯಕ್ಷತೆಯನ್ನು ಎಸ್ ಡಿಎಂಸಿ ಅಧ್ಯಕ್ಷರು, ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಸುರೇಶ್ ಕಣೆಮರಡ್ಕ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ತಾಲೂಕಿನ ಯೋಜನಾಧಿಕಾರಿ ಮಾಧವ ಗೌಡ , ಸುಳ್ಯ ತಾಲೂಕಿನ ಹಿಂದುಳಿದ ವರ್ಗ ಕಲ್ಯಾಣ ಇಲಾಖೆ ಅಧಿಕಾರಿ ಶ್ರೀಮತಿ ಗೀತಾ, ತಾಲೂಕಿನ ಕೃಷಿ ಅಧಿಕಾರಿ ರಮೇಶ್, ವಲಯದ ಮೇಲ್ವಿಚಾರಕಿ ಶ್ರೀಮತಿ ಅನಿತಾ, ಮುಖ್ಯ ಶಿಕ್ಷಕಿಯಾದ ಮಂಜುಳಾ, ಎಸ್‌ಡಿಎಂಸಿ ಉಪಾಧ್ಯಕ್ಷರಾದ ಮುರಳೀದರ, ಎಸ್ ಡಿ ಎಂ ಸಿ ಸದಸ್ಯರಾದ ಸಾವಿತ್ರಿ ಕಣೆ ಮರಡಕ್ಕ ಉಪಸ್ಥಿತರಿದ್ದರು.
ತಾಲೂಕಿನ ಯೋಜನಾಧಿಕಾರಿಯವರು ಪರಿಸರ ಜಾಗೃತಿಯಲ್ಲಿ ಮಕ್ಕಳ ಮತ್ತು ಪೋಷಕರ ಪಾತ್ರ, ಪರಿಸರ ಸಂರಕ್ಷಣೆಯ ಬಗ್ಗೆ ವಿವರಿಸಿದರು.

ಮಕ್ಕಳಿಗೆ, ಮತ್ತು ಶೌರ್ಯ ವಿಪತ್ತು ತಂಡದ ಸದಸ್ಯರಿಗೆ ಹಣ್ಣಿನ ಗಿಡಗಳನ್ನು ವಿತರಣೆ ಮಾಡಲಾಯಿತು.
ಶಾಲಾ ಮಕ್ಕಳಿಗೆ ಪರಿಸರ ಪ್ರಬಂಧ, ಪರಿಸರ ಗೀತೆ, ಪರಿಸರ ಚಿತ್ರ ಬಿಡಿಸುವಿಕೆ, ಎಲೆ ಗುರುತಿಸುವಿಕೆ ಸ್ಪರ್ಧೆಗಳನ್ನು ಮಾಡಿ ವಿಜೇತರಿಗೆ ಯೋಜನೆಯ ವತಿಯಿಂದ ಬಹುಮಾನವನ್ನು ನೀಡಲಾಯಿತು.
ಯೋಜನೆಯ ವತಿಯಿಂದ ಶಾಲೆಗೆ ಜ್ಞಾನದೀಪ ಶಿಕ್ಷಕಿ ಮಂಜೂರಾಗಿದ್ದು ಮಂಜೂರಾತಿ ಪತ್ರವನ್ನು ಯೋಜನಾಧಿಕಾರಿಯವರು ಹಸ್ತಾಂತರಿಸಿದರು.
ಶಿಕ್ಷಕಿ ಪ್ರಮೀಳಾ ಹಾಗೂ ಚಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.











