ಬಂಟ್ವಾಳ ಗ್ರಾಮಾಂತರ ಪೊಲೀಸರ ಮಿಂಚಿನ ಕಾರ್ಯಾಚರಣೆ

0

ಲಕ್ಷಾಂತರ ರೂಪಾಯಿ ಮೌಲ್ಯದ ಅಡಿಕೆ ಕಳ್ಳತನದ ಆರೋಪಿ ಸುಳ್ಯದ ಪೈಚಾರು ಸತೀಶ್‌ ಅರೆಸ್ಟ್

ಲಕ್ಷಾಂತರ ಮೌಲ್ಯದ ಅಡಿಕೆ ಕಳ್ಳತನ ಪ್ರಕರಣದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಸುಳ್ಯಕ್ಕೆ ಬಂದು ಬಂಧಿಸಿದ್ದಾರೆ.

ಬಂಧಿತ ಆರೋಪಿ ಸುಳ್ಯದ ಪೈಚಾರು ನಿವಾಸಿ, 29 ವರ್ಷದ ಸತೀಶ್ ಎಂದು ಗುರುತಿಸಲಾಗಿದೆ.

ಆರೋಪಿ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಮಣಿನಾಲ್ಕೂರು ಗ್ರಾಮದ ಪೂಂಜೂರು ಎಂಬಲ್ಲಿ ಜುಲೈ 3 ರಿಂದ ಜುಲೈ 22 ರ ಅವಧಿಯಲ್ಲಿ ಸುಮಾರು 45 ಪ್ಲಾಸ್ಟಿಕ್ ಚೀಲದಲ್ಲಿದ್ದ ರೂ. 2,20,000/-ಮೌಲ್ಯದ ಒಣ ಅಡಿಕೆ ಕಳವಿನ ಬಗ್ಗೆ ದಿನಾಂಕ: 23-07-2025 0 5 112/2025 0 306, ಬಿ.ಎನ್ .ಎಸ್ ರಂತೆ ಪ್ರಕರಣ ದಾಖಲಾಗಿತ್ತು.

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್‌ ನಿರೀಕ್ಷಕರಾದ ಶಿವಕುಮಾರ ಬಿ.ಯವರ ನೇತೃತ್ವದ ತಂಡ ಮಿಂಚಿನ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ದಸ್ತಗಿರಿ ಮಾಡಿದೆ.

ಆರೋಪಿಯಿಂದ 74 ಸಾವಿರ ರೂ. ಮೌಲ್ಯದ 15 ಚೀಲ ಒಣ ಅಡಿಕೆ, ಕಳವುಗೈದ ಅಡಿಕೆಯನ್ನು ಮಾರಾಟ ಮಾಡಿದ ನಗದು ಹಣ 70 ಸಾವಿರ ರೂ. ಸೇರಿದಂತೆ ಒಟ್ಟು ಮೌಲ್ಯ 1,44,000/- ಆಗಿದ್ದು ಹಾಗೂ ಕೃತ್ಯಕ್ಕೆ ಬಳಸಿದ ಆಪೆ ಗೂಡ್ಸ್‌ ಅಂದಾಜು ಮೌಲ್ಯ 80,000 ರೂ. ಗಳ ಸ್ವತ್ತುಗಳನ್ನು ಸ್ವಾಧೀನಪಡಿಸಿಕೊಂಡಿದೆ. ಆರೋಪಿಯನ್ನು ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.