















ಅಕ್ಷಯ ಯುವಕ ಮಂಡಲ ನೆಟ್ಟಾರು ಇದರ ಆಶ್ರಯದಲ್ಲಿ ಪ್ರಾದೇಶಿಕ ಅರಣ್ಯ ವಲಯ ಪುತ್ತೂರು ಸಹಭಾಗಿತ್ವದಲ್ಲಿ ಅಕ್ಷತಾ ಮಹಿಳಾ ಮಂಡಲ ಸಹಯೋಗದೊಂದಿಗೆ ನೆಟ್ಟಾರು ಪರಿಸರದಲ್ಲಿ ಗಿಡ ನೆಡುವ ಕಾರ್ಯಕ್ರಮ ಆಗಸ್ಟ್ 03ರಂದು ನಡೆಯಿತು. ಕಾರ್ಯಕ್ರಮದಲ್ಲಿ ಪ್ರಾದೇಶಿಕ ಅರಣ್ಯ ವಲಯ ಪುತ್ತೂರು ಇದರ ಬೆಳ್ಳಾರೆ ಶಾಖೆಯ ದಿಲೀಪ್ ಮುಖ್ಯ ಅತಿಥಿಗಳಾಗಿ ಮಾತನಾಡಿ, ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ಯುವಕ ಮಂಡಲವು ಇಂತಹ ಪರಿಸರ ಸ್ನೇಹಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಅರ್ಥಪೂರ್ಣ ಎಂದರು. ಗಿಡ ನೆಟ್ಟು ಅದನ್ನು ಬೆಳೆಸುವುದು ಸಹ ನಮ್ಮ ಕರ್ತವ್ಯವಾಗಿದೆ ಎಂದು ಹೇಳಿ ಶುಭಹಾರೈಸಿದರು.ಶಾಲಾ ವಠಾರದಲ್ಲಿ ಅತಿಥಿಗಳು ಸಾಂಕೇತಿಕವಾಗಿ ಗಿಡ ನೆಡುವ ಮೂಲಕ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಯುವಕ ಮಂಡಲದ ಅಧ್ಯಕ್ಷರಾದ ಭಾಸ್ಕರ ನೆಟ್ಟಾರು, ಮಹಿಳಾ ಮಂಡಲದ ಅಧ್ಯಕ್ಷೆ ಚಂಚಲಾಕ್ಷಿ, ಎಸ್ ಡಿ ಎಂ ಸಿ ಅಧ್ಯಕ್ಷ ವಸಂತ ನೆಟ್ಟಾರು ಹಾಗೂ ಮಹಿಳಾ, ಹಾಗೂ ಯುವಕ ಮಂಡಲ ಸದಸ್ಯರು ಉಪಸ್ಥಿತರಿದ್ದರು.












