
ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ೨೦೨೪-೨೫ನೇ ಸಾಲಿನ ವಾರ್ಷಿಕ ಮಹಾಸಭೆಯು ಆ. ೦೪. ರಂದು ಸಂಘದ ಸಂಘದ ಸಮನ್ವಯ ಸಭಾಂಗಣದಲ್ಲಿ ಸಹಕಾರಿ ಪಿತಾಮಹ ದಿ. ಮೊಳಹಳ್ಳಿ ಶಿವರಾವ್‌ರವರ ಜನ್ಮದಿನಾಚರಣೆಯೊಂದಿಗೆ ಸಂಘದ ಅಧ್ಯಕ್ಷ ಸೋಮಶೇಖರ ಕೊಯಿಂಗಾಜೆಯವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸೋಮಶೇಖರ ಕೊಯಿಂಗಾಜೆಯವರು ಪ್ರಸ್ತಾವಿಕ ಮಾತುಗಳನ್ನಾಡಿದರು. ಸಿ ಇ ಓ ವೀರೇಂದ್ರ ಕುಮಾರ್ ಜೈನ್ ವರದಿ ವಾಚಿಸಿದರು. ಸಭೆಯಲ್ಲಿ ಮೊಳಹಳ್ಳಿ ಶಿವರಾಂರವರ ಜನ್ಮ ದಿನಾಚರಣೆ ಆಚರಿಸಿ ಪುಷ್ಪಾರ್ಚನೆ ಮಾಡಲಾಯಿತು.
















ಅಧ್ಯಕ್ಷರು, ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು, ಕಲ್ಲುಗುಂಡಿ ಡಿಸಿಸಿ ಬ್ಯಾಂಕ್ ಮ್ಯಾನೇಜರ್ ಉಪಸ್ಥಿತರಿದ್ದರು. ೧೫ ಡಿವಿಡೆಂಟ್ ಘೋಷಣೆ ಮಾಡಲಾಯಿತು.
ಮಹಮ್ಮದ್ ಕುಂಞಿ ಸ್ವಾಗತಿಸಿದರು.











