














ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಜನ್ಮದಿನೋತ್ಸವದ ಅಂಗವಾಗಿ
ಮೂರು ಜಿಲ್ಲೆಗಳಲ್ಲಿ ಏಕ ಕಾಲದಲ್ಲಿ 365 ಸ್ಥಳಗಳಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಗುತ್ತಿಗಾರು ವಲಯದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಮೊಗ್ರ ಘಟ ಸಮಿತಿ ಆಶ್ರಯದಲ್ಲಿ ಬೃಹತ್ ಸ್ವಚ್ಚತಾ ಕಾರ್ಯಕ್ರಮ ನಡೆಯಿತು.

ಗುತ್ತಿಗಾರು ವಲಯದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಮೊಗ್ರ ಘಟ ಸಮಿತಿ, ಗ್ರಾಮ ಪಂಚಾಯತ್ ಗುತ್ತಿಗಾರು, ಆರೋಗ್ಯ ಇಲಾಖೆ ಗುತ್ತಿಗಾರು, ಶಾಲಾ ಮೇಲುಸ್ತುವರಿ ಸಮಿತಿ, ಶಿಕ್ಷಕವೃಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೊಗ್ರ, ಪ್ರೆಂಡ್ಸ್ ಕ್ಲಬ್ ಮೊಗ್ರ, ಶ್ರೀ ಕ್ಷೇ. ಧ. ಗ್ರಾ. ಯೋ. ಬಿ. ಸಿ. ಟ್ರಸ್ಟ್ ಮೊಗ್ರ ಒಕ್ಕೂಟ ಇವರ ಸಂಯುಕ್ತ ಆಶ್ರಯದಲ್ಲಿ ಮೊಗ್ರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮವನ್ನು ಮೊಗ್ರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಕಾರ್ಯಪ್ಪ ಗೌಡ ಚಿಕ್ಮುಳಿ ನೆರವೇರಿಸಿದ್ದರು. ಸಭೆಯ ಅಧ್ಯಕ್ಷತೆಯನ್ನು ಮೊಗ್ರ ಘಟ ಸಮಿತಿಯ ಅಧ್ಯಕ್ಷೆ ಶ್ರೀಮತಿ ಶಾರದ ವಹಿಸಿದ್ದರು. ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ಗುರುಪ್ರಸಾದ್ ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ಗುತ್ತಿಗಾರು ಗ್ರಾ.ಪಂ. ಸದಸ್ಯರುಗಳಾದ ಶ್ರೀಮತಿ ಲತಾ ಅಜಡ್ಕ, ಭರತ್ ಕಮಿಲ, ಮೊಗ್ರ ಶಾಲಾ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಶ್ರೀಮತಿ ಅಶ್ವಿನಿ ವಸಂತ ಮೊಗ್ರ, ಶ್ರೀ ಕ್ಷೇ.ಧ.ಗ್ರಾ.ಯೋ. ಬಿ.ಸಿ. ಟ್ರಸ್ಟ್ ಮೊಗ್ರ ಒಕ್ಕೂಟದ ಅಧ್ಯಕ್ಷ ಮದುಕರ, ಮೊಗ್ರ ಘಟ ಸಮಿತಿ ಪದಾಧಿಕಾರಿಗಳು, ಸದಸ್ಯರು, ಆಶಾಕಾರ್ಯಕರ್ತೆಯರು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಮೊಗ್ರ ಘಟಸಮಿತಿಯ ಸೇವಾದೀಕ್ಷಿತೆ ಶ್ರೀಮತಿ ಭವ್ಯ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
ಘಟ ಸಮಿತಿ ಕಾರ್ಯದರ್ಶಿ ಶ್ರೀಮತಿ ಶಿಶಿಮಾ ಜಾಕೆ ವಂದಿಸಿದರು.










