ಬಳ್ಪ ಗ್ರಾಮ ಪಂಚಾಯತ್ ಹಾಗೂ ಆದರ್ಶ ಸಂಜೀವಿನಿ ಬಳ್ಪ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ, ಅಂಗನವಾಡಿ ಕೇಂದ್ರ ಬಳ್ಪ ಇವರ ಸಹಯೋಗದೊಂದಿಗೆ ಗ್ರಾಮ ಪಂಚಾಯತ್, ಅಂಗನವಾಡಿ ಕೇಂದ್ರ ಹಾಗೂ ಸಂಜೀವಿನಿ ಕಟ್ಟಡದ ಸುತ್ತಲಿನ ಪರಿಸರ ಸ್ವಚ್ಛತೆ ಕಾರ್ಯ ನಡೆಸಲಾಯಿತು.
















ಮಾದಕ ವಸ್ತು ಮುಕ್ತ ಕರ್ನಾಟಕ ಅಭಿಯಾನದಡಿ ಪಂಚಾಯತ್ ರಾಜ್ ಸಂಸ್ಥೆಯ ತಾಲೂಕು ಸಂಪನ್ಮೂಲ ವ್ಯಕ್ತಿ ಧನ್ಯಶ್ರೀ ಯವರು ಮಾದಕ ವಸ್ತುಗಳ ದುಷ್ಪರಿಣಾಮ ಹಾಗೂ ಇವುಗಳಿಂದ ಮಕ್ಕಳನ್ನು ಜಾಗೃತರಾಗಿಸುವಲ್ಲಿ ಪೋಷಕರ ಪಾತ್ರ ಬಗ್ಗೆ ಜಾಗೃತಿ ಮೂಡಿಸಿದರು. ಮಾದಕ ವಸ್ತುಗಳ ಬಳಕೆ, ವಿತರಿಸುವುದು ಹಾಗೂ ಮಾರಾಟದ ವಿರುದ್ಧ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.
ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರು ಸಿಬ್ಬಂದಿಗಳು ಸಂಜೀವಿನಿ ಒಕ್ಕೂಟದ ಅಧ್ಯಕ್ಷರು ಪದಾಧಿಕಾರಿಗಳು ಸಿಬ್ಬಂದಿಗಳು ಹಾಗೂ ಸದಸ್ಯರು ಅಂಗನವಾಡಿ ಕೇಂದ್ರದ ಸಿಬ್ಬಂದಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.










