ಡಾ. ಕುರುಂಜಿ ವೆಂಕಟ್ರಮಣ ಗೌಡರಿಗೆ ಕೆವಿಜಿ ಐಪಿಎಸ್ ನಲ್ಲಿ ಪುಷ್ಪ ನಮನ

0

ಕುರುಂಜಿ ವೆಂಕಟರಮಣ ಗೌಡರ ಆದರ್ಶಗಳನ್ನು ನಾವೆಲ್ಲರೂ ಪಾಲಿಸೋಣ : ಅರುಣ್ ಕುಮಾರ್

ಕೆವಿಜಿ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಕೆವಿಜಿ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಇದರ ಸ್ಥಾಪಕಾಧ್ಯಕ್ಷರಾದ ಡಾ. ಕುರುಂಜಿ ವೆಂಕಟರಮಣ ಗೌಡರ 12ನೇ ವರ್ಷದ ಪುಣ್ಯ ಸ್ಮರಣೆಯನ್ನು ಮಾಡಲಾಯಿತು.

ಪೂಜ್ಯ ಕೆವಿಜಿಯವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿ ಮೌನ ಪ್ರಾರ್ಥನೆ ಮಾಡಲಾಯಿತು.
ಶಾಲಾ ಪ್ರಾಂಶುಪಾಲರಾದ ಅರಣ್ ಕುಮಾರ್ ಪೂಜ್ಯ ಕೆವಿಜಿಯವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಗೌರವಾರ್ಪಣೆ ಮಾಡಿ, ಪೂಜ್ಯ ಕೆವಿಜಿಯವರ ಆದರ್ಶ ಗುಣಗಳನ್ನು ನಾವೆಲ್ಲರೂ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸಿದರು.


ಉಪ ಪ್ರಾಂಶುಪಾಲರಾದ ಶಿಲ್ಪ ಬಿದ್ದಪ್ಪ ಪುಷ್ಪ ನಮನ ಸಲ್ಲಿಸಿ ಗೌರವಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು, ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದು, ಪುಷ್ಪ ನಮನ ಅರ್ಪಿಸಿ, ಗೌರವ ಸಲ್ಲಿಸಿದರು.